ಶನಿವಾರ, 24 ಅಕ್ಟೋಬರ್ 2026

Deadly Accident: ಕುಟುಂಬದ ಕಾರ್ಯಕ್ರಮ ಮುಗಿಸಿ ವಾಪಾಸ್‌ ಬರುವಾಗ ಕಾರಿಗೆ ಡಿಕ್ಕಿ ಹೊಡೆದ ಟ್ರಕ್‌; ಮೂವರು ಮಕ್ಕಳು ಸಹಿತ 10 ಮಂದಿ ಸಾವು

Deadly Accident: ಛತ್ತೀಸ್‌ಗಢದ ಬೆಮೆತಾರಾದಲ್ಲಿ ಹೆದ್ದಾರಿಯಲ್ಲಿ ನಿಂತಿದ್ದ ಕಾರಿಗೆ ಟ್ರಕ್‌ ಡಿಕ್ಕಿ ಹೊಡೆದ ಪರಿಣಾಮ 3 ಮಕ್ಕಳು ಸೇರಿ 10 ಮಂದಿ ಸಾವಿಗೀಡಾದ ಘಟನೆಯೊಂದು ನಡೆದಿದೆ

Deadly Accident

Deadly Accident: ಛತ್ತೀಸ್‌ಗಢದ ಬೆಮೆತಾರಾದಲ್ಲಿ ಹೆದ್ದಾರಿಯಲ್ಲಿ ನಿಂತಿದ್ದ ಕಾರಿಗೆ ಟ್ರಕ್‌ ಡಿಕ್ಕಿ ಹೊಡೆದ ಪರಿಣಾಮ 3 ಮಕ್ಕಳು ಸೇರಿ 10 ಮಂದಿ ಸಾವಿಗೀಡಾದ ಘಟನೆಯೊಂದು ನಡೆದಿದೆ. ಈ ಘಟನೆಯಲ್ಲಿ 23 ಮಂದಿಗೆ ಗಾಯಗಳಾಗಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಾಯಗೊಂಡವರನ್ನು ರಾಯ್‌ಪುರ ಏಮ್ಸ್‌ಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ:  Srinivas Prasad passed away: ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ವಿಧಿವಶ !!

ಟ್ರಕ್‌ನಲ್ಲಿ ಕುಟುಂಬದ ಕಾರ್ಯಕ್ರಮದ ಕಾರಣದಿಂದ ಹಲವು ಮಂದಿ ಟ್ರಕ್‌ನಲ್ಲಿ ಹೋಗುತ್ತಿದ್ದು, ಹೆದ್ದಾರಿಯಲ್ಲಿ ನಿಂತ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅವಘಡ ಸಂಭವಿಸಿದೆ.

ಇದನ್ನೂ ಓದಿ:  Puttur: ಕೆಲಸದ ಆಮಿಷ ನೀಡಿ ಅತ್ಯಾಚಾರ ಯತ್ನ ಪ್ರಕರಣ; ಪ್ರಮುಖ ಆರೋಪಿಗೆ ಜಾಮೀನು

ಮೃತ ವ್ಯಕ್ತಿಗಳೆಲ್ಲ ಪಥರಾ ಗ್ರಾಮದವರಾಗಿದ್ದು, ತಿರೈಯಾ ಗ್ರಾಮದ ಕುಟುಂಬದ ಕಾರ್ಯಕ್ರಮ ಮುಗಿಸಿ ಹಿಂತಿರುಗುವ ಸಮಯದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಆಗಮಿಸಿದ್ದು, ಮುಂದಿನ ತನಿಖೆ ಮಾಡುತ್ತಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ