Home News High Court: ಕನ್ನಡಿಗನ ಮೇಲೆ ಮಾರಣಾಂತಿಕ ಹಲ್ಲೆ – ಹೈಕೋರ್ಟ್​ ಮೊರೆ ಹೋಗಿ ಬಚಾವ್ ಆದ...

High Court: ಕನ್ನಡಿಗನ ಮೇಲೆ ಮಾರಣಾಂತಿಕ ಹಲ್ಲೆ – ಹೈಕೋರ್ಟ್​ ಮೊರೆ ಹೋಗಿ ಬಚಾವ್ ಆದ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್

Hindu neighbor gifts plot of land

Hindu neighbour gifts land to Muslim journalist

High Court : ಕನ್ನಡಿಗನ ಮೇಲೆ ಅಪವಾದ ಹೊರಿಸಿ ಮಾರಣಾಂತಿಕ ಹಲ್ಲೆ ಎಸಗಲಾಗಿದೆ ಎಂಬ ಕತೆ ಕಟ್ಟಿದ್ದ ವಿಂಗ್‌ ಕಮಾಂಡರ್‌ ಶಿಲಾದಿತ್ಯ ಬೋಸ್‌ (Wing Commander Shiladitya Bose)​ ಇದೀಗ ಹೈಕೋರ್ಟ್‌ (Karnataka high court) ಮೊರೆ ಹೋಗಿದ್ದಾನೆ.

ಹೌದು, ಕಾರಿಗೆ ಬೈಕ್ ಟಚ್ ಆಯ್ತು ಅನ್ನೋ ಕ್ಷುಲ್ಲಕ ಕಾರಣಕ್ಕೆ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ (Wing Commander Shiladitya Bose)​ ಏಕಾಏಕಿ ಬೈಕ್ ಸವಾರ ವಿಕಾಸ್​​ ಮೇಲೆ ಹಲ್ಲೆ ಮಾಡಿದ್ದರು. ಈ ಘಟನೆ ಕರ್ನಾಟಕದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಬಳಿಕ ಶಿಲಾದಿತ್ಯ ಬೋಸ್ ವಿರುದ್ಧ ಕೊಲೆಯತ್ನ ಕೇಸ್​ ದಾಖಲಾಗಿತ್ತು. ಸದ್ಯ ಈ ಕೊಲೆಯತ್ನ ಪ್ರಕರಣ ರದ್ದು ಕೋರಿ ಶಿಲಾದಿತ್ಯ ಬೋಸ್​ ಹೈಕೋರ್ಟ್​ಗೆ(High Court) ಅರ್ಜಿ ಸಲ್ಲಿಸಿದ್ದರು.

ಶಿಲಾದಿತ್ಯ ಬೋಸ್ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದ್ದು, ವಿಕಾಸ್ ಹಲ್ಲೆಯಿಂದ ಶಿಲಾದಿತ್ಯ ಬೋಸ್​ಗೆ ಗಂಭೀರ ಗಾಯವಾಗಿದೆ. ವಿಕಾಸ್​ಗೆ ಸಣ್ಣ ಗಾಯವೆಂದು ಎಫ್‌ಐಆರ್​ನಲ್ಲೇ ಉಲ್ಲೇಖವಾಗಿದೆ. ಆದರೂ ಶಿಲಾದಿತ್ಯ ವಿರುದ್ಧ ಕೊಲೆ ಯತ್ನದ FIR ದಾಖಲಿಸಲಾಗಿದೆ. 12 ಗಂಟೆ ವಿಳಂಬವಾಗಿ ದೂರು ದಾಖಲಿಸಲಾಗಿದೆ ಎಂದು ವಾದ ಮಂಡಿಸಿದ್ದಾರೆ.

ವಾದ ಪ್ರತಿವಾದ ಆಲಿಸಿದ ನ್ಯಾ. ಹೇಮಂತ್ ಚಂದನಗೌಡರ್ ಅವರಿದ್ದ ಹೈಕೋರ್ಟ್ ಪೀಠ, ಶಿಲಾದಿತ್ಯ ಬೋಸ್ ವಿರುದ್ಧ ಬಲವಂತದ ಕ್ರಮ ಕೈಗೊಳ್ಳಬಾರದು. ಶಿಲಾದಿತ್ಯ ಬೋಸ್ ಪೊಲೀಸರ ವಿಚಾರಣೆಗೆ ಸಹಕರಿಸಬೇಕು. ಸಮನ್ಸ್ ನೀಡುವಾಗ ಕಾನೂನಿನ ಪ್ರಕ್ರಿಯೆ ಪಾಲಿಸಬೇಕು. ಹೈಕೋರ್ಟ್ ಅನುಮತಿ ಇಲ್ಲದೇ ದೋಷಾರೋಪ ಪಟ್ಟಿ ಸಲ್ಲಿಸಬಾರದು ಎಂದು ಆದೇಶ ಹೊರಡಿಸಿದೆ.