Home News Bengaluru: 108 ಆಂಬುಲೆನ್ಸ್ ನೌಕರರ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯ: ಆಗಸ್ಟ್ 1 ರಿಂದ ಪ್ರತಿಭಟನೆ...

Bengaluru: 108 ಆಂಬುಲೆನ್ಸ್ ನೌಕರರ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯ: ಆಗಸ್ಟ್ 1 ರಿಂದ ಪ್ರತಿಭಟನೆ ಎಚ್ಚರಿಕೆ!

Hindu neighbor gifts plot of land

Hindu neighbour gifts land to Muslim journalist

Bengaluru: ಬಡ ರೋಗಿಗಳಿಗೆ ಆಶಾದಾಯಕವಾಗಿರುವ 108 ಆರೋಗ್ಯ ಕವಚ ತುರ್ತುಚಿಕಿತ್ಸಾ ವಾಹನದ ಸಿಬ್ಬಂದಿಗಳು ಹಲವು ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಆ.,1 ರಿಂದ ಪ್ರತಿಭಟನೆಗೆ ನಿರ್ಧರಿಸಿದ್ದಾರೆ.

108 ಆರೋಗ್ಯ ಕವಚ ಸೇವೆಯನ್ನು ಇಷ್ಟು ದಿನಗಳ ಕಾಲ ಜಿವಿಕೆ ಎಂಬ ಖಾಸಗಿ ಸಂಸ್ಥೆ ನಿರ್ವಹಣೆ ಮಾಡುತ್ತಿದ್ದು, ಇನ್ನುಮುಂದೆ ಆರೋಗ್ಯ ಇಲಾಖೆಯೇ ನಿರ್ವಹಣೆ ಮಾಡುವುದಾಗಿ ಘೋಷಿಸಿದೆ.

ಈವರೆಗೂ ಒಂದೇ ಸಂಸ್ಥೆಯ ನಿರ್ವಹಣೆ ಅಡಿಯಲ್ಲಿ 3500 ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. ಆದರೆ ಮುಂಬರುವ ದಿನಗಳಲ್ಲಿ ಇವರನ್ನೇ ಮುಂದುವರಿಸುವ ಬಗ್ಗೆ ಸರ್ಕಾರ ಅಥವಾ ಇಲಾಖೆ ಸ್ಪಷ್ಟತೆ ನೀಡಿಲ್ಲ. ಅಲ್ಲದೆ ಹಲವು ಸಮಸ್ಯೆಹಾಗೂ ಬೇಡಿಕೆಗಳನ್ನು ನೌಕರರು ಮುಂದಿಟ್ಟಿದ್ದಾರೆ. ಸರ್ಕಾರ ಇದಕ್ಕೆ ಸ್ಪಂದಿಸದಿದ್ದಲ್ಲಿ ಆಗಸ್ಟ್ 1 ರಿಂದ ಕೆಲಸಕ್ಕೆ ಗೈರು ಹಾಜರಾಗುವ ಮೂಲಕ ಹೋರಾಟ ಅನಿವಾರ್ಯ ಎಂದು ಸರ್ಕಾರಕ್ಕೆ ಎಚ್ಚರಿಸಿದ್ದಾರೆ.