ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಚಿವ ಸಂಪುಟವನ್ನು ಪುನಾರಚನೆ ಮಾಡಲು ಮತ್ತು ಪ್ರಮುಖ ಖಾತೆಗಳನ್ನು ಮರುಹಂಚಿಕೆ ಮಾಡಲು ನಿರ್ಧರಿಸಿದ್ದು, ಮುಂಬರುವ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗುವುದಕ್ಕೂ ಮುನ್ನವೇ ಈ ಇಡೀ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.
Sponsoredಈ ಇಡೀ ಸಂಪುಟ ಪುನಾರಚನೆಯ ಅತ್ಯಂತ ದೊಡ್ಡ ಮತ್ತು ಪ್ರಮುಖ ಹೈಲೈಟ್ ಎಂದರೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ‘ಉಪಪ್ರಧಾನಿ’ ಹುದ್ದೆಗೆ ಏರಿಸುವ ಸಾಧ್ಯತೆಗಳಿದೆ ಎನ್ನುತ್ತಿರುವುದು. ಸದ್ಯಕ್ಕೆ ಸರ್ಕಾರದ ನೀತಿಗಳು ಮತ್ತು ಪಕ್ಷದ ಕಾರ್ಯತಂತ್ರಗಳ ಮೇಲೆ ಅಮಿತ್ ಶಾ ಅವರು ಈಗಾಗಲೇ ಅಪಾರ ಪ್ರಭಾವ ಹೊಂದಿದ್ದಾರೆ. ಮುಂಬರುವ ದಿನಗಳಲ್ಲಿ ಬಿಜೆಪಿಯ ಭವಿಷ್ಯದ ನಾಯಕ ಯಾವುದು ಎಂಬುದನ್ನು ಹೈಕಮಾಂಡ್ ಇಡೀ ಜಗತ್ತಿಗೆ ಸ್ಪಷ್ಟವಾಗಿ ಸಾರಲು ಈ ನಿರ್ಧಾರ ಕೈಗೊಳ್ಳುತ್ತಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.
ಇನ್ನೂ ಸದ್ಯದ ಸಂಪುಟದಲ್ಲಿರುವ ಹೈಪ್ರೊಫೈಲ್ ಸಚಿವರಾದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ರಾಜಕೀಯ ಭವಿಷ್ಯದ ಕುರಿತು ಮಾಧ್ಯಮಗಳಲ್ಲಿ ಭಾರಿ ಊಹಾಪೋಹಗಳು ಎದ್ದಿವೆ. ಇದರ ಜೊತೆ ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನವೀನ್ ಅವರು ಅಧಿಕಾರ ವಹಿಸಿಕೊಂಡಿದ್ದು, ಅವರ ನೇತೃತ್ವದಲ್ಲಿ ಪಕ್ಷದ ಹೊಸ ಪದಾಧಿಕಾರಿಗಳ ಪಟ್ಟಿ ಬಿಡುಗಡೆಯಾಗುತ್ತಿದೆ.




