

ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದಲ್ಲಿ ಆಟೋ ಚಾಲಕರೊಬ್ಬರ ಮೃತದೇಹ ಪತ್ತೆಯಾಗಿದೆ.
ಮೃತಪಟ್ಟ ವ್ಯಕ್ತಿ ಧರ್ಮಸ್ಥಳ ಗ್ರಾಮದ ನೇತ್ರಾವತಿ ಮಲ್ಲರ್ಮಾಡಿ ನಿವಾಸಿ ಸದಾನಂದ (48ವ) ಎಂದು ತಿಳಿದುಬಂದಿದೆ.

ಇವರು ನೇತ್ರಾವತಿಯಲ್ಲಿ ಆಟೋ ಚಾಲಕರಾಗಿದ್ದು, ತನ್ನ ಆಟೋವನ್ನು ಬೆಳ್ತಂಗಡಿಯ ಶೋ. ರೂಂನಲ್ಲಿ ನಿಲ್ಲಿಸಿದ್ದರೆಂದು ತಿಳಿದು ಬಂದಿದ್ದು, ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ ಎಂದು ತಿಳಿದುಬಂದಿದೆ. ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಧರ್ಮಸ್ಥಳ ಪೋಲಿಸರು ತನಿಖೆ ನಡೆಸುತ್ತಿದ್ದಾರೆ.













