Home News ಧರ್ಮಸ್ಥಳ ಬುರುಡೆ ಪ್ರಕರಣ: ಜ.3 ಕ್ಕೆ ತೀರ್ಪು ಮುಂದೂಡಿಕೆ

ಧರ್ಮಸ್ಥಳ ಬುರುಡೆ ಪ್ರಕರಣ: ಜ.3 ಕ್ಕೆ ತೀರ್ಪು ಮುಂದೂಡಿಕೆ

Hindu neighbor gifts plot of land

Hindu neighbour gifts land to Muslim journalist

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಬುರುಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಳ್ತಂಗಡಿ ನ್ಯಾಯಲಕ್ಕೆ ಮುಂದಿನ ಕ್ರಮಕ್ಕಾಗಿ ಎಸ್‌ಐಟಿ ಸಲ್ಲಿಕೆ ಮಾಡಿರುವ ವರದಿ ಮೇಲಿನ ವಿಚಾರಣೆ ಪೂರ್ಣಗೊಂಡಿದ್ದು, ತೀರ್ಪನ್ನು ಜ.3 ಕ್ಕೆ ಮುಂದೂಡಿದೆ.

ಎಸ್‌ಐಟಿ ನ.20 ನ್ಯಾಯಾಲಯಕ್ಕೆ ವರದಿ ಸಲ್ಲಿಕೆ ಮಾಡಿ, ಚಿನ್ನಯ್ಯ ಸಹಿತ 6 ಮಂದಿಯನ್ನು ಆರೋಪಿಗಳನ್ನಾಗಿ ಉಲ್ಲೇಖ ಮಾಡಿತ್ತು. ತನಿಖೆಯ ವಿವರವನ್ನು ದಾಖಲಿಸಿ ಮುಂದಿನ ತನಿಖೆಗೆ ಮಾರ್ಗದರ್ಶನ ನೀಡುವಂತೆ ಎಸ್‌ಐಟಿ ಪರ ಸಹಾಯಕ ಸರಕಾರಿ ಅಭಿಯೋಜಕ ದಿವ್ಯರಾಜ್‌ ಹೆಗ್ಡೆ ಅವರ ವಾದ ಮಂಡನೆ ಮಾಡಿದ್ದರು. ಪ್ರಕರಣಕ್ಕೆ ಸಂಬಂಧಪಟ್ಟಂತೆ ದಾಖಲೆಗಳನ್ನು ಸಲ್ಲಿಸಿ ಕಾನೂನು ಕ್ರಮಕ್ಕಾಗಿ ನ್ಯಾಯಾಲಯಕ್ಕೆ ಮನವರಿ ಮಾಡಿದ್ದರು.

ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಸೆಕ್ಷನ್ ನಡಿ ಸುಳ್ಳು ಸಾಕ್ಷಿಯ ಅಪರಾಧಕ್ಕಾಗಿ ಕಾನೂನು ಕ್ರಮಕ್ಕೆ ವಿನಂತಿಸಿ ಆರೋಪಿಗಳ ವಿರುದ್ಧ 3,923 ಪುಟಗಳ ವರದಿಯನ್ನು ಸಲ್ಲಿಸಿದ್ದರು. ಕೆಲವೊಂದು ಮಹತ್ವದ ಅಂಶಗಳನ್ನು ನ್ಯಾಯಾಲಯದ ಮುಂದಿಟ್ಟು ಮುಂದಿನ ಕಾನೂನು ಕ್ರಮಕ್ಕಾಗಿ ವಿನಂತಿಸಿದ್ದರು. ಸೋಮವಾರ ಪ್ರಕರಣದ ವಿಚಾರಣೆ ನಡೆಸಿದ ಬೆಳ್ತಂಗಡಿಯ ಹೆಚ್ಚುವರಿ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರು, ತೀರ್ಪನ್ನು ಜನವರಿ 3ಕ್ಕೆ ಮುಂದೂಡಿದರು.