ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಬಂಗ್ಲೆಗುಡ್ಡೆಯಲ್ಲಿ SIT ಉತ್ಖನನ ನಡೆಸಿದ ವೇಳೆ ಕೆಲವು ಅಸ್ಥಿಪಂಜರಗಳು ಸಿಕ್ಕಿದ್ದವು. ಆ ಅಸ್ಥಿಪಂಜರಗಳ ಪೈಕಿ ಮೂರು ಅಸ್ಥಿಪಂಜರಗಳ ಗುರುತು ಪತ್ತೆಯಾಗಿದೆ.
Sponsoredಡಿಎನ್‌ಎ ಪರೀಕ್ಷೆಯಲ್ಲಿ ಗುರುತು ದೃಢಪಟ್ಟಿರುವವರ ಪೈಕಿ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಟಿ.ಶೆಟ್ಟಿಗೇರಿ ಗ್ರಾಮದ ಯು.ಬಿ. ಅಯ್ಯಪ್ಪ (70), ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದಾಸರಕಲ್ಲಹಳ್ಳಿಯ ಆದಿಶೇಷ (27) ಹಾಗೂ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮೀಸಗಾಣಹಳ್ಳಿ ಗ್ರಾಮದ ಕೃಷ್ಣಪ್ಪ (85) ಸೇರಿದ್ದಾರೆ. ಅಂದರೆ, ಡಿಎನ್‌ಎ ಪರೀಕ್ಷೆಯಲ್ಲಿ ಗುರುತು ಪತ್ತೆಯಾದ ಮೂವರೂ ಪುರುಷರು ಎಂಬುದು ದೃಢಪಟ್ಟಿದೆ. ಇವರ ಪೈಕಿ ಅಯ್ಯಪ್ಪ ಮತ್ತು ಕೃಷ್ಣಪ್ಪ 70 ವರ್ಷ ಮೇಲ್ಪಟ್ಟವರಾಗಿದ್ದಾರೆ.
ವಿಶೇಷವೆಂದರೆ, ಹತ್ಯೆಗೊಳಗಾದವರೆಲ್ಲರೂ ಮಹಿಳೆಯರು ಎಂಬ ಆರೋಪಗಳ ನಡುವೆ, ಪ್ರಸ್ತುತ ಡಿಎನ್‌ಎ ದೃಢಪಟ್ಟಿರುವ ಮೂವರೂ ಪುರುಷರು ಎಂಬುದು ಪರೀಕ್ಷೆಯಿಂದ ದೃಢಪಟ್ಟಿದೆ. ಮೂವರ ಕುಟುಂಬಸ್ಥರಿಂದ ಸಂಗ್ರಹಿಸಲಾಗಿದ್ದ ಡಿಎನ್‌ಎ ಮಾದರಿಗಳು ಅಸ್ಥಿಪಂಜರಗಳಿಗೆ ಸಂಪೂರ್ಣ ಹೊಂದಾಣಿಕೆಯಾಗಿವೆ




