Home News Belthangady: ಧರ್ಮಸ್ಥಳದ ಅಪರಾಧ ಕೃತ್ಯ ಪ್ರಕರಣ- ಅಸ್ಥಿಪಂಜರಗಳ ಅವಶೇಷ ವಶಪಡಿಸಿಕೊಂಡ ಪೊಲೀಸರು!!

Belthangady: ಧರ್ಮಸ್ಥಳದ ಅಪರಾಧ ಕೃತ್ಯ ಪ್ರಕರಣ- ಅಸ್ಥಿಪಂಜರಗಳ ಅವಶೇಷ ವಶಪಡಿಸಿಕೊಂಡ ಪೊಲೀಸರು!!

Hindu neighbor gifts plot of land

Hindu neighbour gifts land to Muslim journalist

Belthangady : ಇಡೀ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿರುವ ಧರ್ಮಸ್ಥಳದಲ್ಲಿ ಶವಗಳನ್ನು ಸಾಮೂಹಿಕವಾಗಿ ಹೂತು ಹಾಕಿದ ಆರೋಪ ಮಾಡಿರುವ ದೂರುದಾರರನ್ನು ಜು.11ರಂದು ಬೆಳ್ತಂಗಡಿ ತಾಲ್ಲೂಕಿನ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈ ಬೆನ್ನಲ್ಲೇ ಬೆಳ್ತಂಗಡಿ ಪೊಲೀಸರು ಅಸ್ಥಿಪಂಜರಗಳ ಅವಶೇಷಗಳನ್ನು ವಶಪಡಿಸಿಕೊಂಡಿದ್ದಾರೆ.

ನ್ಯಾಯಾಧೀಶರ ಮುಂದೆ ಹೇಳಿಕೆಯನ್ನು ಪಡೆದ ಬಳಿಕ ಆತನನ್ನು ಬೆಳ್ತಂಗಡಿ ಠಾಣೆಗೆ ಕರೆದೊಯ್ಯಲಾಯಿತು. ಅಲ್ಲಿ ವ್ಯಕ್ತಿ ತಂದಿದ್ದ ತಲೆಬುರುಡೆಯನ್ನು ವಿಧಿವಿಜ್ಞಾನ ಪ್ರಯೋಗಾಲಾಯದ ಅಧಿಕಾರಿಗಳ ಮುಂದೆ ಪೊಲೀಸ್ ಸಮ್ಮುಖದಲ್ಲಿ ಹಾಜರು ಪಡಿಸಿರುವುದಾಗಿ ತಿಳಿದುಬಂದಿದೆ.

 ಕುರಿತು ಪತ್ರಿಕಾ ಪ್ರಕಟನೆ ನೀಡಿರುವ ವಕೀಲರಾದ ಓಜಸ್ವಿ ಗೌಡ ಹಾಗು ಸಚಿನ್ ದೇಶಪಾಂಡೆ ಅವರು, ಧರ್ಮಸ್ಥಳದಲ್ಲಿ ಮೃತದೇಹಗಳನ್ನು ಸಾಮೂಹಿಕವಾಗಿ ಹೂತು ಹಾಕಿದ ಪ್ರಕರಣದ ದೂರುದಾರರಿಗೆ witness protection scheme 2018 ರ ಅಡಿಯಲ್ಲಿ ಸೂಕ್ತ ರಕ್ಷಣೆ ನೀಡಲಾಗಿದೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಜುಲೈ 10, 2025 ರ ಸಂಜೆ ನಮಗೆ ಸಂದೇಶ ಕಳುಹಿಸಿದ್ದರು. ದೂರುದಾರರು, ರಕ್ಷಣೆ ನೀಡುವಂತೆ ನೀಡಿದ್ದ ಕೋರಿಕೆಗೆ ತ್ವರಿತವಾಗಿ ಸೂಕ್ತ ಕ್ರಮ ಕೈಗೊಂಡದ್ದಕ್ಕಾಗಿ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ, ದಕ್ಷಿಣ ಕನ್ನಡದ ಪೊಲೀಸ್ ಅಧಿಕಾರಿಗಳಿಗೆ ಮತ್ತು ಕರ್ನಾಟಕ ಸರ್ಕಾರಕ್ಕೆ ದೂರುದಾರರು ತಮ್ಮ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ ಎಂದು ತಿಳಿಸಿದ್ದಾರೆ.