ಮಂಗಳವಾರ, 27 ಅಕ್ಟೋಬರ್ 2026
Trending

ಅ. 11 ರಿಂದ 19 : ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

ಉಜಿರೆ: ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಇದೇ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ.

Sponsored

ದೇವಸ್ಥಾನದ ಎದುರು ಇರುವ ಪ್ರವಚನಮಂಟಪದಲ್ಲಿ ಸಂಜೆ ಆರು ಗಂಟೆಯಿAದ ಒಂಭತ್ತು ಗಂಟೆ ವರೆಗೆ ನಾಡಿನ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.
ಅ. 11: ಭಾನುವಾರ: ಕುಮಾರಿ ಪ್ರಾಪ್ತಿ ಶೆಟ್ಟಿ, ಧರ್ಮಸ್ಥಳ ಮತ್ತು ಕುಮಾರಿ ಆದ್ವಿ, ನಿಡಿಗಲ್ (ಭಕ್ತಿಸಂಗೀತ), ಅ. 12: ಸೋಮವಾರ: ಪವಿತ್ರವಿನಯ್ ಮಯ್ಯ ಅರ್ಕುಳ, ಮಂಗಳೂರು (ಸುಗಮ ಸಂಗೀತ), ಅ. 13: ಮಂಗಳವಾರ: ಕುಮಾರಿ ಮಾನ್ಸಿ, ಮೈಸೂರು (ಭಕ್ತಿಸಂಗೀತ), ಅ. 14: ಬುಧವಾರ: ಮಾಸ್ಟರ್ ಆಗಮ, ಪೆರ್ಲ, ಮಂಗಳೂರು (ಕರ್ನಾಟಕ ಶಾಸ್ತಿçÃಯ ಸಂಗೀತ), ಅ. 15: ಗುರುವಾರ: ಕುಮಾರಿ ಧೃತಿ ಬಿ. ಆತ್ರೇಯಾಸ್, ಕುಮಾರಿ ಧನ್ವಿ ಬಿ. ಆತ್ರೇಯಾಸ್ ಮತ್ತು ಮಾಸ್ಟರ್ ಅಸ್ರಮೇಯ ಗುರುಪ್ರಸಾದ್, ಬೆಂಗಳೂರು (ನೃತ್ಯ, ಗಾನಲಹರಿ), ಅ. 16: ಶುಕ್ರವಾರ: ಸನತ್‌ಕುಮಾರ್, ಬೆಂಗಳೂರು (ವಯಲಿನ್ ವಾದನ), ಅ. 17: ಶನಿವಾರ: ಕುಮಾರಿ ಮಯೂರಿ ಭಟ್ ಪೊಳಲಿ, ಬಂಟ್ವಾಳ (ಕರ್ನಾಟಕ ಶಾಸ್ತಿçÃಯ ಸಂಗೀತ), ಅ. 18: ಆದಿತ್ಯವಾರ: ಕುಮಾರಿ ಐಶ್ವರ್ಯ ಜೋಗಿ ಮತ್ತು ತಂಡ, ಕುಂದಾಪುರ (ಸುಮಧುರ ಗಾನವೈಭವ), ಅ. 19: ಸೋಮವಾರ: ಕುಮಾರಿ ಅರ್ಚಿಷಾ ರಾವ್ ಮತ್ತು ಬಳಗ, ಬೆಂಗಳೂರು (ಸಂಜೆ ಗಂಟೆ 6.30 ರಿಂದ 8.30). ಮಲ್ಲಿಕಾಮಟ್ಟಿ ಮತ್ತು ಬಳಗ, ಪೊಳಲಿ (ರಾತ್ರಿ ಗಂಟೆ 9 ರಿಂದ 11.30) ಭಕ್ತಿ ಸಂಗೀತ.

Advertisement
Advertisement
Advertisement