ಶನಿವಾರ, 24 ಅಕ್ಟೋಬರ್ 2026

ಅಡ್ಡಮತದ ಅಪಚಾರಕ್ಕೆ ಧರ್ಮಸ್ಥಳವನ್ನು ಎಳೆಯೋದು ಬೇಡ-ಸುರೇಶ್‌ ಕುಮಾರ್‌ ತೀವ್ರ ಆಕ್ಷೇಪ

ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮತ್ತು ಶಾಸಕರ ಆಣೆ-ಪ್ರಮಾಣಕ್ಕೆ ಹಿರಿಯ ನಾಯಕ ಸುರೇಶ್‌ ಕುಮಾರ್‌ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಪೋಸ್ಟ್‌ನಲ್ಲಿ ಏನಿದೆ?
ಶ್ರೀ ಕ್ಷೇತ್ರ ಧರ್ಮಸ್ಥಳ ಅದರದೇ ಪಾವಿತ್ರ್ಯತೆ ಹೊಂದಿದೆ. ನಾನು ವಿಧಾನಸಭೆಯಲ್ಲಿ ಹೇಳಿದಂತೆ ನನ್ನ ಜೀವನದಲ್ಲಿ ನನ್ನ ತಾಯಿಯ ನಂತರ ನನಗಿರುವ ನಿಜವಾದ ಬಂಧು ಎಂದರೆ ಮಂಜುನಾಥ ಸ್ವಾಮಿ. ರಾಜಕಾರಣದಲ್ಲಿ ನಡೆದುಬಿಟ್ಟಿರುವ ಕೀಳು ಮಟ್ಟದ ಅಡ್ಡಮತದ ಅಪಚಾರಕ್ಕೆ ಧರ್ಮಸ್ಥಳವನ್ನು ಎಳೆಯುವುದು ದಯವಿಟ್ಟು ಬೇಡ. ಈ ಅಪಚಾರ ಮಾಡಿರುವವರು ಹೆತ್ತ ತಾಯಿಗೆ ದ್ರೋಹ ಮಾಡಿದಷ್ಟೇ ಪಾಪ ಮಾಡಿದ್ದಾರೆ.