ಸೋಮವಾರ, 26 ಅಕ್ಟೋಬರ್ 2026
Trending

ದಿಡುಪೆ: ಮನೆಯೊಂದರ ಅಂಗಳದಲ್ಲಿ ಚಿರತೆ ಪ್ರತ್ಯಕ್ಷ

ದಿಡುಪೆ: ಮನೆಯೊಂದರ ಅಂಗಳದಲ್ಲಿ ಚಿರತೆಯೊಂದು ಕಾಣಿಸಿಕೊಂಡಿದ್ದು, ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಲವಂತಿಗೆ ಗ್ರಾಮದ ಕೊಂಡಾಲು ಮನೆಯಲ್ಲಿ ತಡರಾತ್ರಿ ಈ ಘಟನೆ ನಡೆದಿದೆ.

Sponsored

ಚಿರತೆ ಓಡಾಟದ ದೃಶ್ಯ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮನೆಯಂಗಳದಲ್ಲಿ ಮಲಗಿದ್ದ ನಾಯಿಯ ಬೇಟೆಗಾಗಿ ಚಿರತೆ ಬಂದಿದ್ದು, ನಾಯಿಯನ್ನು ಅಟ್ಟಿಸಿಕೊಂಡು ಹೋಗುವ ಮತ್ತು ತೆಗೆದುಕೊಂಡು ಹೋಗುವ ದೃಶ್ಯ ಜಯಂತ್‌ ಅವರ ಮನೆಯ ಸಿಸಿಟಿವಿಯಲ್ಲಿ ದಾಖಲಾಗಿದೆ.

Advertisement
Advertisement

ರಾತ್ರಿ 10.30 ರಂದು ನಾಯಿ ಬೊಗಳಿದ ಶಬ್ದಕ್ಕೆ ಮನೆಯವರು ಹೊರ ಬಂದಿದ್ದಾರೆ, ಚಿರತೆ ತಕ್ಷಣ ತೆರಳಿದೆ. ಕೆಲವು ದಿನಗಳಿಂದ ಆಸುಪಾಸಿನಲ್ಲಿ ಚಿರತೆ ಓಡಾಟದ ಮಾಹಿತಿ ಇತ್ತು ಎನ್ನಲಾಗಿದೆ. ಸ್ವಲ್ಪ ಹೊತ್ತಿನಲ್ಲಿ ನಾಯಿಯ ಶಬ್ದ ಕೂಡಾ ಕೇಳಿರಲಿಲ್ಲ. ಮನೆಯ ಸಿಸಿಟಿವಿ ದೃಶ್ಯ ನೋಡಿದಾಗ ಚಿರತೆ ನಾಯಿಯನ್ನು ಎತ್ತಿಕೊಂಡು ಹೋಗುವ ದೃಶ್ಯ ಕಂಡಿದೆ.

ಕೂಡಲೇ ಅರಣ್ಯ ಇಲಾಖೆಯವರು ಚಿರತೆಯನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ಆಗ್ರಹ ಮಾಡಿದ್ದಾರೆ.

Advertisement