Home News Dinesh Gundu Rao: ರಾಜೀನಾಮೆ ಕೊಡಲು ಸಿದ್ಧ: ದಿನೇಶ್ ಗುಂಡೂರಾವ್

Dinesh Gundu Rao: ರಾಜೀನಾಮೆ ಕೊಡಲು ಸಿದ್ಧ: ದಿನೇಶ್ ಗುಂಡೂರಾವ್

Hindu neighbor gifts plot of land

Hindu neighbour gifts land to Muslim journalist

Dinesh Gundu Rao: ಬಳ್ಳಾರಿಯಲ್ಲಿ ಬಾಣಂತಿಯರ ಸಾವು (Ballari Death Case) ಪ್ರಕರಣದಲ್ಲಿ ಒಂದು ವೇಳೆ ನನ್ನ ತಪ್ಪಿದ್ದರೆ ರಾಜೀನಾಮೆ ಕೊಡಲು ಸಿದ್ಧನಿದ್ದೇನೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಹೇಳಿದ್ದಾರೆ.

ಹೌದು, ಈಗಾಗಲೇ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ವಿಧಾನಸೌಧದಲ್ಲಿ ಮಾತನಾಡಿದ ಅವರು, ಬಿಜೆಪಿಯವರು (BJP) ಲೋಕಾಯುಕ್ತಕ್ಕೆ ಖಂಡಿತ ದೂರು ಕೊಡಲಿ. ಇದರಲ್ಲಿ ವಿಪಕ್ಷದವರ ಸಹಕಾರವೂ ಬೇಕು. ಈ ಪ್ರಕರಣದಲ್ಲಿ ನನ್ನ ತಪ್ಪಿದ್ರೆ ನಾನು ರಾಜೀನಾಮೆ ಕೊಡಲೂ ಸಿದ್ಧನಾಗಿದ್ದೇನೆ ಎಂದಿದ್ದಾರೆ. ಆದರೆ ಈ ಪ್ರಕರಣದಲ್ಲಿ ಸರ್ಕಾರ ಗಂಭೀರವಾಗಿದೆ. ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ ಆಗಲೇಬೇಕು. ಕ್ರಮ ತೆಗೆದುಕೊಳ್ಳಲೇಬೇಕು. ಇಲ್ಲಿಯವರೆಗೆ ಈ ವರ್ಷ ರಾಜ್ಯದಲ್ಲಿ 327 ಮೆಟರ್ನಲ್ ಸಾವಾಗಿದೆ. ಎಲ್ಲವನ್ನೂ ಪರಿಶೀಲಿಸಿ ಅಂತ ಹೇಳಿದ್ದೇವೆ. ಇಂತಹ ಪ್ರಕರಣಗಳಲ್ಲಿ ಸಹನೆ ಇರಬಾರದು, ಕಠಿಣ ಕಾನೂನು ಕ್ರಮ ಆಗಬೇಕು ಎಂದು ತಿಳಿಸಿದರು.

ಸತ್ತ ಬಾಣಂತಿಯರಿಗೆ ಅದೇ ಬ್ಯಾಚ್‌ನ ರಿಂಗರ್ ಲ್ಯಾಕ್ಟೇಟ್ ದ್ರಾವಣ ಕೊಡಲಾಗಿತ್ತು. ಈಗಾಗಲೇ ಕಂಪನಿ ವಿರುದ್ಧ ಕ್ರಮಕ್ಕೆ ಮುಂದಾಗಿದ್ದೇವೆ ಎಂದರು.