ಸೋಮವಾರ, 26 ಅಕ್ಟೋಬರ್ 2026
Trending

ಸಿಎಂ ಡಿಕೆಶಿ ಸಂಪುಟದಲ್ಲಿ ಭುಗಿಲೆದ್ದ ಅಸಮಾಧಾನ! ರಾಮಲಿಂಗಾರೆಡ್ಡಿ ನಂತರ ಇದೀಗ ಮುನಿಯಪ್ಪ ಸರದಿ

Annabhagya
image source: Wikipedia
Advertisement

ಬೆಂಗಳೂರು; ಹಿರಿಯ ಸಚಿವ ರಾಮಲಿಂಗಾರೆಡ್ಡಿ ಅವರ ರಾಜೀನಾಮೆ ನಂತರ ಇದೀಗ ಮತ್ತೊಬ್ಬ ಹಿರಿಯ ನಾಯಕ ಹಾಗೂ ಆಹಾರ ಸಚಿವ ಕೆ.ಹೆಚ್‌ ಮುನಿಯಪ್ಪ ಅವರು ಬಹಿರಂಗವಾಗಿಯೇ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ.

Sponsored

ದೇವನಹಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿರುವ ಅವರು, ಖಾತೆ ಹಂಚಿಕೆಯಲ್ಲಿ ಸೀನಿಯಾರಿಟಿ ಕಾಯ್ದುಕೊಂಡಿಲ್ಲ, ಈ ತಾರತಮ್ಯ ಹೀಗೆನೇ ಮುಂದುವರಿದರೆ 2028 ರ ಚುನಾವಣೆಯಲ್ಲಿ ಪಕ್ಷಕ್ಕೆ ಭಾರೀ ಕಷ್ಟವಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

Advertisement
Advertisement

ನನಗೆ ಬೇರೆ ಖಾತೆ ನೀಡಬೇಕು. ನಾನು ಕಾಂಗ್ರೆಸ್ ಪಕ್ಷದಲ್ಲಿ ಸೀನಿಯರ್ ಇದ್ದೇನೆ . ಏಳು ಬಾರಿ ಸಂಸದನಾಗಿ ಕೆಲಸ ಮಾಡಿದ್ದೇನೆ . ನನಗೆ ಬೇರೆ ಖಾತೆ ನೀಡುವಂತೆ ಈಗಾಗಲೇ ವರಿಷ್ಠರ ಗಮನಕ್ಕೆ ತಂದಿದ್ದೇನೆ. ನನ್ನ ಪಕ್ಷ ನಿಷ್ಠೆ ಹೈಕಮಾಂಡ್ ಗೆ ಗೊತ್ತಿದೆ. ರಾಹುಲ್ ಗಾಂಧಿಯವರು ತಾಯಿ ಸ್ಥಾನದಲ್ಲಿದ್ದಾರೆ ಈ ಎಲ್ಲಾ ಸಮಸ್ಯೆಯನ್ನು ಬಗೆಹರಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ದೇವನಹಳ್ಳಿಯಲ್ಲಿ ಸಚಿವ ಕೆಎಚ್ ಮುನಿಯಪ್ಪ ಹೇಳಿದ್ದಾರೆ.

Advertisement
div class="ere-sticky">