ಸೋಮವಾರ, 26 ಅಕ್ಟೋಬರ್ 2026
Trending

ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟ: ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿ ರಾಷ್ಟ್ರ ಮಟ್ಟಕ್ಕೆ

ಪುತ್ತೂರು: ಜೈ ಗೋಪಾಲ ಗರೋಡಿಯ ರಾಷ್ಟೋತ್ಮಾನ ವಿದ್ಯಾಕೇಂದ್ರ ಬೆಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯ 44 ಕೆ.ಜಿ ವಿಭಾಗದಲ್ಲಿ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಖುಷಿ ಕೆ. ಎಂ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Sponsored

ಇವರು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.