Home News D K Shivkumar : ಯಕ್ಷಗಾನ ಪ್ರಿಯರಿಗೆ ಗುಡ್ ನ್ಯೂಸ್ ಕೊಟ್ಟ ಡಿಕೆ ಶಿವಕುಮಾರ್...

D K Shivkumar : ಯಕ್ಷಗಾನ ಪ್ರಿಯರಿಗೆ ಗುಡ್ ನ್ಯೂಸ್ ಕೊಟ್ಟ ಡಿಕೆ ಶಿವಕುಮಾರ್ !!

Hindu neighbor gifts plot of land

Hindu neighbour gifts land to Muslim journalist

D K Shivkumar : ಕರ್ನಾಟಕದ ಗಂಡು ಕಲೆ ಎಂದೇ ಪ್ರಸಿದ್ಧಿ ಪಡೆದಿರುವ ಯಕ್ಷಗಾನಕ್ಕೆ ಇದೀಗ ಕರಾವಳಿಯಲ್ಲಿ ನೂರಾರು ವಿಘ್ನಗಳು ಎದುರಾಗುತ್ತಿದೆ. ಹಿಂದೆಲ್ಲಾ ರಾತ್ರಿ ಬೆಳಗೂ ನಡೆಯುತ್ತಿದ್ದ ಯಕ್ಷಗಾನಕ್ಕೆ ಇದೀಗ ನಡುರಾತ್ರಿಯಲ್ಲಿ ಬ್ರೇಕ್ ಬೀಳುತ್ತಿದೆ. ಸರ್ಕಾರ ಧ್ವನಿವರ್ಧಕಕ್ಕೆ ತಂದಿರುವ ರೂಲ್ಸ್ ಗಳು ಯಕ್ಷಗಾನಕ್ಕೆ ಭಾರಿ ಅಡಚಣೆ ಉಂಟು ಮಾಡುತ್ತಿವೆ. ಇದೀಗ ಈ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಯಕ್ಷಗಾನ ಪ್ರಿಯರಿಗೆ ಗುಡ್ ನ್ಯೂಸ್ ನೀಡಿದ್ದಾರೆ.

ವಿಧಾನಸಭೆಯ ಗಮನ ಸೆಳೆವ ಚರ್ಚೆ ವೇಳೆ ಬಿಜೆಪಿ ಶಾಸಕ ವಿ.ಸುನೀಲ್ ಕುಮಾರ್ ಅವರು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿರುವ ಯಕ್ಷಗಾನ ಪ್ರದರ್ಶನಕ್ಕೆ ಧ್ವನಿವರ್ಧಕಕ್ಕೆ ಜಾರಿಗೊಳಿಸಿರುವ ನಿಯಮದಿಂದಾಗಿ ತುಂಬಾ ತೊಂದರೆಯಾಗುತ್ತಿದೆ. ಹೀಗಾಗಿ ಸರ್ಕಾರ ಇದನ್ನು ಪರಿಶೀಲಿಸಿ ಯಕ್ಷಗಾನ ಪ್ರದರ್ಶನಕ್ಕೆ ಅನುಮತಿ ನೀಡುವಂತೆ ಗಮನ ಸೆಳೆದರು.

ಇದಕ್ಕೆ ಉತ್ತರ ನೀಡಿದ ಡಿ.ಕೆ. ಶಿವಕುಮಾರ್ ಅವರು “ಯಕ್ಷಗಾನ ಪ್ರದರ್ಶನಕ್ಕೆ ಪೂರ್ವಾನುಮತಿ ಪಡೆಯಲು ಸಮಸ್ಯೆಯಾಗುತ್ತಿದೆ ಎಂದು ಸುನೀಲ್ ಕುಮಾರ್ ಅವರು ಪ್ರಸ್ತಾಪಿಸಿದ್ದಾರೆ. ಯಕ್ಷಗಾನ ಮಾಡುವಾಗ ಯಾರೂ ಇಂದು ಅರ್ಜಿ ಹಾಕಿ ನಾಳೆ ಯಕ್ಷಗಾನ ಪ್ರದರ್ಶನ ಮಾಡುವುದಿಲ್ಲ. ಅದಕ್ಕೆ 15 ದಿನಗಳ ತಯಾರಿ ಇರುತ್ತದೆ. ಬಿಜೆಪಿ ಕಾಲದಲ್ಲೂ ಕೆಲವು ನಿಯಮಾವಳಿಗಳನ್ನು ರೂಪಿಸಲಾಗಿದೆ. ಯಕ್ಷಗಾನ ಪ್ರದರ್ಶನಕ್ಕೆ ಅನುಮತಿ ಪಡೆಯಲು ಕಾಲಾವಕಾಶ ನೀಡಬೇಕು. ಯಕ್ಷಗಾನ ಬೆಳಗಿನ ಜಾವದವರೆಗೂ ನಡೆಯುವುದರಿಂದ ಮಧ್ಯರಾತ್ರಿಯೇ ನಿಲ್ಲಿಸಬೇಕು ಎಂದು ಯಾರೂ ಆಕ್ಷೇಪ ಮಾಡುವುದಿಲ್ಲ. ಈಗ ಆಗಿರುವ ಪ್ರಕರಣವನ್ನು ಪರಿಶೀಲನೆ ಮಾಡುತ್ತೇವೆ. ಯಕ್ಷಗಾನ, ಬಯಲಾಟ ದೇಶದ ಆಸ್ತಿ. ಇದಕ್ಕೆ ಪ್ರೋತ್ಸಾಹ ನೀಡಬೇಕು ಎಂಬುದು ನಮ್ಮ ಉದ್ದೇಶವಿದೆ. ನಮ್ಮ ಸಂಸ್ಕೃತಿ ಪರಂಪರೆಯನ್ನು ನಿಲ್ಲಿಸಲು ಆಗುವುದಿಲ್ಲ” ಎಂದು ಭರವಸೆ ನೀಡಿದರು.