Home News Doctor Retirement Age: ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ- ಮಹತ್ವದ ತೀರ್ಮಾನ

Doctor Retirement Age: ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ- ಮಹತ್ವದ ತೀರ್ಮಾನ

Hindu neighbor gifts plot of land

Hindu neighbour gifts land to Muslim journalist

Doctor Retirement Age: ಶುಕ್ರವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಖಾಯಂ ಸೂಪರ್‌ ಸ್ಪೆಷಾಲಿಟಿ ವೈದ್ಯರ ವಯೋನಿವೃತ್ತಿ ವಯಸ್ಸು 60 ರಿಂದ 65 ವರ್ಷಕ್ಕೆ ಹೆಚ್ಚಳ ಮಾಡಲು ಸಂಪುಟ ಸಭೆ ನಿರ್ಧಾರ ಮಾಡಿದೆ.

ಸೂಪರ್‌ ಸ್ಪೆಷಾಲಿಟಿ ವೈದ್ಯರ ಕೊರತೆ ಇರುವ ಕಾರಣ ಅವರ ವಯೋನಿವೃತ್ತಿ ವಯಸ್ಸನ್ನು 60 ರಿಂದ 65 ವರ್ಷಕ್ಕೆ ಹೆಚ್ಚಳ ಮಾಡಲು ನಿರ್ಣಯ ಕೈಗೊಳ್ಳಲಾಗಿದೆ. ಸೂಪರ್‌ ಸ್ಪೆಷಾಲಿಟಿ ವೈದ್ಯರ ಹುದ್ದೆಯು 500 ಇದ್ದು ಇದರಲ್ಲಿ 250 ಮಂದಿ ಮಾತ್ರ ಕೆಲಸದಲ್ಲಿದ್ದಾರೆ. ಇದರಲ್ಲಿ 50 ಮಂದಿ ನಿವೃತ್ತಿ ಅಂಚಿನಲ್ಲಿದ್ದಾರೆ. ಆ ಹುದ್ದೆ ಅವರ ನಿವೃತ್ತಿ ನಂತರ ಖಾಲಿ ಆಗಲಿದೆ. ಸೂಪರ್‌ ಸ್ಪೆಷಾಲಿಟಿ ವೈದ್ಯರ ಅಗತ್ಯ ಇರುವ ಕಾರಣ ನಿವೃತ್ತಿ ವಯೋಮಿತಿ ಹೆಚ್ಚಳ ಮಾಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಕಾನೂನು ಮತ್ತು ಸಂಸದೀಯ ಸಚಿವ ಎಚ್‌.ಕೆ.ಪಾಟೀಲ್‌ ಹೇಳಿದರು.