Home News Ranya Rao: ರನ್ಯಾ ರಾವ್ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ಗೆ ಬಿಗ್ ಟ್ವಿಸ್ಟ್ – ನಟಿಗೆ ಪ್ರಭಾವಿ...

Ranya Rao: ರನ್ಯಾ ರಾವ್ ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ಗೆ ಬಿಗ್ ಟ್ವಿಸ್ಟ್ – ನಟಿಗೆ ಪ್ರಭಾವಿ ರಾಜಕೀಯ ನಾಯಕರ ನಂಟು?

Hindu neighbor gifts plot of land

Hindu neighbour gifts land to Muslim journalist

Ranya Rao: ಅಕ್ರಮ ಚಿನ್ನಸಾಗಾಟ ಆರೋಪ ದಡಿ ಕನ್ನಡದ ಖ್ಯಾತ ನಟಿ ರನ್ಯಾ ರಾವ್ ಅವರು ಅರೆಸ್ಟ್ ಆಗಿದ್ದಾರೆ. ಈ ಪ್ರಕರಣಕ್ಕೆ ಸಿಬಿಐ ಕೂಡ ಎಂಟ್ರಿ ಕೊಟ್ಟಿದೆ. ಈ ಬೆನ್ನಲ್ಲೇ ಈ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ನಟಿ ರನ್ಯಾ ಅವರಿಗೆ ಪ್ರಭಾವಿ ರಾಜಕೀಯ ನಾಯಕರ ನಂಟು ಇದೆ ಎನ್ನಲಾಗಿದೆ.

ಹೌದು, ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ರನ್ಯಾ ರಾವ್‌ ಅವರನ್ನ ಬಂಧಿಸಿ DRI ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಈ ವಿಚಾರಣೆಯ ವೇಳೆ ಆರೋಪಿಯ ಈ ಕೃತ್ಯದ ಹಿಂದೆ ಹಲವು ಪ್ರಭಾವಿ ವ್ಯಕ್ತಿಗಳು ಇರುವ ಸುಳಿವುಗಳು ದೊರೆತಿದ್ದು, ಆರೋಪಿತೆ ನಟಿ ರನ್ಯಾ ರಾವ್‌ಗೆ ಹಲವು ರಾಜಕೀಯ ನಾಯಕರ ಜೊತೆ ಸಂಪರ್ಕ ಇದೆ ಎಂಬ ಮಾಹಿತಿ ಬಯಲಾಗಿದೆ.

ಅಂದಹಾಗೆ ರನ್ಯಾ ರಾವ್ ನಿರ್ದೇಶಕಿಯಾಗಿರುವ ಕಂಪನಿಗೆ ಕರ್ನಾಟಕ ಸರ್ಕಾರದಿಂದಲೇ 12 ಎಕರೆ ಜಮೀನು ಮಂಜೂರಾಗಿದೆ. ಸರ್ಕಾರವೇ ಜಮೀನು ಮಂಜೂರು ಮಾಡಿರುವ ದಾಖಲೆಯಿದೆ. ಒಬ್ಬ ನಟಿ, ನಿರ್ದೇಶಕಿಯಾಗಿರುವ ಕಂಪನಿಗೆ 12 ಎಕರೆ ಜಮೀನು ಮಂಜೂರಾಗಿದ್ದು ಹೇಗೆ ಎಂಬ ಹತ್ತು ಹಲವು ಪ್ರಶ್ನೆಗಳು ಹುಟ್ಟಿಕೊಂಡಿವೆ. ಜೊತೆಗೆ ಕಳೆದ ಮೂರು ತಿಂಗಳ ಹಿಂದೆ ಬೆಂಗಳೂರಲ್ಲಿ ರನ್ಯಾ ರಾವ್ ಅದ್ಧೂರಿ ವಿವಾಹ ಮಹೋತ್ಸವ ನಡೆದಿತ್ತು. ಆ ಮದುವೆಯಲ್ಲಿ ಪ್ರಭಾವಿ ಸಚಿವರು ಭಾಗಿಯಾಗಿದ್ದರು. ಇದೀಗ ನಟಿ ರನ್ಯಾ ರಾವ್‌ ಬಂಧನವಾಗುತ್ತಿದ್ದಂತೆ ಆ ಸಚಿವರು ತಬ್ಬಿಬ್ಬಾಗಿದ್ದಾರೆ ಎನ್ನಲಾಗಿದೆ. ಒಟ್ಟಿನಲ್ಲಿ ತನಿಖೆಯ ಮೂಲಕ ಈ ಎಲ್ಲ ಹತ್ಯಗಳು ಹೊರಬೀಳಲಿವೆ.