G-GFTHW1YKW0
ಭಾನುವಾರ, 25 ಅಕ್ಟೋಬರ್ 2026

ದಸರಾ ಒಳಗೆ ಬೇರೆ ಆಚರಣೆಗಳನ್ನು ತುರುಕಬೇಡಿ – ದಸರಾ ಕಂಬಳಕ್ಕೆ ಪ್ರತಾಪ್ ಸಿಂಹ ವಿರೋಧ!!

ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ಪ್ರಪ್ರಥಮ ಬಾರಿಗೆ ಕರಾವಳಿಯ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳವನ್ನು ಆಯೋಜಿಸಬೇಕೆಂದು ಕರಾವಳಿ ಭಾಗದ ಶಾಸಕರಾದ ಅಶೋಕ್ ಕುಮಾರ್ ರೈ ಅವರು ಮುತುವರ್ಜಿಯಿಂದ ಓಡಾಡುತ್ತಾ ಇದಕ್ಕೆ ಬೇಕಾಗಿರುವ ಎಲ್ಲಾ ಸಕಲ ಸಿದ್ಧತೆಗಳನ್ನು ನಡೆಸಿದ್ದಾರೆ. ಆದರೆ ಇತ್ತ ಮೈಸೂರು ರಾಜಮನೆತನದ ಸಂಸದ ಯದುವೀರ್ ಒಡೆಯರ್ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Sponsored

ಕೆಲವು ದಿನಗಳ ಹಿಂದಷ್ಟೇ ಮೈಸೂರು ಮಹಾರಾಜ ಹಾಗೂ ಸಂಸದ ಯದುವೀರ್ ಒಡೆಯರ್ ಅವರು ದಸರಾದಲ್ಲಿ ಕಂಬಳ ಆಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಇದೀಗ ಮಾಜಿ ಸಂಸದ ಪ್ರತಾಪ್ ಸಿಂಹ ಕೂಡ ದಸರಾ ಕಂಬಳಕೆ ವಿರೋಧ ತೋರಿದ್ದಾರೆ. ಬಗ್ಗೆ ಮಾತನಾಡಿದ ಪ್ರತಾಪ್ ಸಿಂಹ ಅವರು “ನಮ್ಮ ದಸರಾ ಆಚರಣೆಯ ನಡುವೆ ಬೇರೆಯದನ್ನು ಯಾಕೆ ತರುತ್ತೀರಾ?. ರಾಜ್ಯದಲ್ಲಿ ಸವದತ್ತಿ ಎಲ್ಲಮ್ಮನ ಜಾತ್ರೆ, ಕರಾವಳಿಯ ಕಂಬಳ ಹಾಗೂ ಮೈಸೂರು ದಸರಾಗೆ ತನ್ನದೇ ಆದ ವಿಶಿಷ್ಟ ಪರಂಪರೆ ಮತ್ತು ಮಹತ್ವವಿದೆ. ನಮಗೆ ಕಂಬಳದ ಮೇಲೆ ಯಾವುದೇ ವಿರೋಧವಿಲ್ಲ. ಆದರೆ, ದಸರಾದ ಪರಂಪರೆಯೇ ಬೇರೆ. ಅದರ ಸಾಂಪ್ರದಾಯಿಕ ಚೌಕಟ್ಟಿನಲ್ಲೇ ದಸರಾ ನಡೆಯಬೇಕು. ದಸರಾ ಒಳಗೆ ಬೇರೆ ಬೇರೆ ಆಚರಣೆಗಳನ್ನು ಬಲವಂತವಾಗಿ ತುರುಕುವ ಅಗತ್ಯವಿಲ್ಲಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Marriage AdMarriage AdSponsored

ಇನ್ನೂ ಈ ಬಾರಿ ಅತ್ಯಂತ ವಿಜೃಂಭಣೆಯಿಂದ ಆಚರಿಸಲು ಸರ್ಕಾರ ಸಿದ್ಧತೆ ನಡೆಸಿದ್ದು ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಡಿಕೆ ಶಿವಕುಮಾರ್‌ (DK Shivakumar) ನೇತೃತ್ವದಲ್ಲಿ ಸಭೆ ನಡೆಯಿತು. ಆದರೆ ಈ ಸಭೆಯಲ್ಲಿ ಕಂಬಳದ ಬಗ್ಗೆಯೂ ಮಾತುಕತೆ ನಡೆಯಿತು. ಸಭೆಯಲ್ಲಿ ಯಾವುದೇ ತೀರ್ಮಾನ ತೆಗೆದುಕೊಳ್ಳದ ಶಿವಕುಮಾರ್‌ ಮುಂದಿನ ಸಭೆಯಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳೋಣ ಎಂದು ಹೇಳಿದ್ದಾರೆ.