Home News ಚಾರ್ಮಾಡಿ ಘಾಟ್‌ ಹೆದ್ದಾರಿ ದ್ವಿಪಥ; 343.74 ಕೋಟಿ ಬಿಡುಗಡೆ-ಸಂಸದ ಕ್ಯಾ.ಚೌಟ

ಚಾರ್ಮಾಡಿ ಘಾಟ್‌ ಹೆದ್ದಾರಿ ದ್ವಿಪಥ; 343.74 ಕೋಟಿ ಬಿಡುಗಡೆ-ಸಂಸದ ಕ್ಯಾ.ಚೌಟ

Hindu neighbor gifts plot of land

Hindu neighbour gifts land to Muslim journalist

ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್‌ ಚೌಟ ಅವರು “ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ 343.74 ಕೋಟಿ ರೂ. ಅನುಮಾದವನ್ನು ಚಾರ್ಮಾಡಿ ಘಾಟ್‌ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಬಿಡುಗಡೆ ಮಾಡಿದೆ. ಹಾಗಾಗಿ ಶೀಘ್ರದಲ್ಲೇ ಕಾಮಗಾರಿ ಪ್ರಾರಂಭವಾಗಲಿದೆ ಎಂದು ಹೇಳಿದ್ದಾರೆ.

ಮಂಗಳೂರು-ಮೂಡಿಗೆರೆ-ತುಮಕೂರು ಸಂಪರ್ಕ ಮಾಡುವ ರಾಷ್ಟ್ರೀಯ ಹೆದ್ದಾರಿ 73 ಕಿ.ಮೀ.ನಿಂದ 86.20 ಕಿ.ಮೀ. ಅಂತರದವರೆಗೆ ಅಭಿವೃದ್ಧಿ ಕೆಲಸ ಆಗಲಿದೆ. ಈ ಮೂಲಕ ಚಾರ್ಮಾಡಿ ಘಾಟ್‌ ದ್ವಿಪಥವಾಗಿ ಅಗಲೀಕರಣಗೊಳಲ್ಲಿದ್ದು, ಕಾಮಗಾರಿಯ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಸಂಸದರು ಹೇಳಿದ್ದಾರೆ.

ಕರಾವಳಿ ಭಾಗದ ಜನರಿಗೆ ಇದರ ಉಪಯೋಗವಾಗಲಿದೆ. ಸುಗಮ ಸರಕು ಸಾಗಾಣೆ ಜೊತೆಗೆ ವ್ಯಾಪಾರ ವಹಿವಾಟು ಹೆಚ್ಚಲಿದೆ. ಈ ಮೂಲಕ ಕರ್ನಾಟಕದ ವಾಣಿಜ್ಯ ಹೆಬ್ಬಾಗಿಲು ಎಂದೆನಿಸಿಕೊಂಡಿರುವ ಕರಾವಳಿ ಮತ್ತಷ್ಟು ಪ್ರಗತಿ ಪಥದಲ್ಲಿ ಸಾಗಲಿದೆ. ಹಾಗಾಗಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಸಚಿವ ನಿತಿನ್‌ ಗಡ್ಕರಿ, ಇಲಾಖೆಯ ಅಧಿಕಾರಿಗಳಿಗೆ ಜನತೆಯ ಪರವಾಗಿ ಧನ್ಯವಾದ ಎಂದು ಸಂಸದರು ಹೇಳಿದ್ದಾರೆ.