Home News ಚಾಲಕನ ನಿಯಂತ್ರಣ ತಪ್ಪಿ ಜನರ ಮೇಲೆ ಹರಿದ ಎಲೆಕ್ಟ್ರಿಕ್ ಬಸ್ !! | 6 ಮಂದಿ...

ಚಾಲಕನ ನಿಯಂತ್ರಣ ತಪ್ಪಿ ಜನರ ಮೇಲೆ ಹರಿದ ಎಲೆಕ್ಟ್ರಿಕ್ ಬಸ್ !! | 6 ಮಂದಿ ಸಾವು, 12 ಜನರಿಗೆ ಗಂಭೀರ ಗಾಯ

Hindu neighbor gifts plot of land

Hindu neighbour gifts land to Muslim journalist

ಚಾಲಕನ ನಿಯಂತ್ರಣ ತಪ್ಪಿ ಎಲೆಕ್ಟ್ರಿಕ್ ಬಸ್ಸೊಂದು ಜನರ ಮೇಲೆ ಹರಿದಿದ್ದು, ಈ ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿದ್ದು, 12 ಜನರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರಲ್ಲಿ ನಡೆದಿದೆ.

ವೇಗವಾಗಿ ಬಂದ ಬಸ್ ನಿಯಂತ್ರಣ ತಪ್ಪಿದೆ. ಈ ವೇಳೆ ಮೂರು ಕಾರ್, ಹಲವು ಬೈಕ್ ಈ ಅಪಘಾತದಲ್ಲಿ ಜಖಂ ಆಗಿವೆ. ಇಷ್ಟೊಂದು ವಾಹನಗಳಿಗೆ ಗುದ್ದಿದ್ದು ಮಾತ್ರವಲ್ಲದೇ ಅಲ್ಲೆ ಪಕ್ಕದಲ್ಲಿದ್ದ ಟ್ರಾಫಿಕ್ ಬೂತ್‍ಗೆ ನುಗ್ಗಿದೆ. ನಂತರ ಟ್ರಕ್‍ಗೆ ಗುದ್ದಿ ಬಸ್ ನಿಂತಿದೆ. 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಾಳುಗಳನ್ನು ಅಲ್ಲಿಯೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬಸ್ ಚಾಲಕನನ್ನು ಬಂಧಿಸಲಾಗಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕಾನ್ಪುರದ ಉಪ ಪೊಲೀಸ್ ಆಯುಕ್ತ ತಿಳಿಸಿದ್ದಾರೆ.

ಕಾನ್ಪುರದ ಬಾಬುಪುರ್ವಾ ಪ್ರದೇಶದಲ್ಲಿ ನಡೆದ ರಸ್ತೆ ಅಪಘಾತದ ಬಗ್ಗೆ ತಿಳಿದು ತುಂಬಾ ದುಃಖವಾಗಿದೆ. ಇದರಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ನನ್ನ ತೀವ್ರ ಸಂತಾಪಗಳು. ಇದರೊಂದಿಗೆ ಈ ಅಪಘಾತದಲ್ಲಿ ಗಾಯಗೊಂಡಿರುವ ಎಲ್ಲರಿಗೂ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದಾರೆ.