Home latest 5 ವರ್ಷದ ಮಗಳ ಮೇಲೆ ವೈದ್ಯ ತಂದೆಯಿಂದ ಪೈಶಾಚಿಕ ಕೃತ್ಯ| ಮಗಳ ಕೆನ್ನೆ, ಎದೆ ಭಾಗಕ್ಕೆ...

5 ವರ್ಷದ ಮಗಳ ಮೇಲೆ ವೈದ್ಯ ತಂದೆಯಿಂದ ಪೈಶಾಚಿಕ ಕೃತ್ಯ| ಮಗಳ ಕೆನ್ನೆ, ಎದೆ ಭಾಗಕ್ಕೆ ಕಚ್ಚಿ ವಿಕೃತಿ!!!

Hindu neighbor gifts plot of land

Hindu neighbour gifts land to Muslim journalist

ಕುಡಿದ ಮತ್ತಿನಲ್ಲಿ ತಂದೆಯೊಬ್ಬ ಮಗಳ ಕೆನ್ನೆ ಎದೆ ಭಾಗಕ್ಕೆ ಕಚ್ಚಿ ವಿಕೃತಿ ಮೆರೆದಿರುವ ಘಟನೆಯೊಂದು ನಡೆದಿದೆ. ಬೆಳಗಾವಿ ತಾಲೂಕಿನ ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಕುಂದಾನಗರಿ ಈ ಪೈಶಾಚಿಕ ಕೃತ್ಯಕ್ಕೆ ಸಾಕ್ಷಿಯಾಗಿದೆ. ಕುಡಿದ ಮತ್ತಿನಲ್ಲಿ ಪಾಪಿ ತಂದೆಯೊಬ್ಬ ಐದು ವರ್ಷದ ಮಗಳ ಕೆನ್ನೆ ಮತ್ತು ಎದೆಯ ಭಾಗಕ್ಕೆ ಕಚ್ಚಿ ವಿಕೃತಿ ಮೆರೆದಿದ್ದಾನೆ. ಬೆಳಗಾವಿ ತಾಲೂಕಿನ ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ಮಗಳ ಮೇಲೆ ವಿಕೃತಿ ಮೆರೆದ ತಂದೆ ಖಾಸಗಿ ಆಸ್ಪತ್ರೆಯಲ್ಲಿ ಆರ್‌ಎಂಪಿ ವೈದ್ಯನಾಗಿ ಕೆಲಸ ಮಾಡುತಿದ್ದಾನೆ.

ಇತ್ತ ಖಾಸಗಿ ಆಸ್ಪತ್ರೆಯಲ್ಲಿ ಅಟೆಂಡರ್ ಆಗಿ ಮಗುವಿನ ತಾಯಿ ಸೇವೆ ಸಲ್ಲಿಸುತ್ತಿದ್ದು, ತಾಯಿ ಕೆಲಸಕ್ಕೆ ತೆರಳಿದ ವೇಳೆ ಕುಡಿದ ನಶೆಯಲ್ಲಿ ತಂದೆ ಈ ವಿಕೃತಿ ಮೆರೆದಿದ್ದಾನೆ. ಸದ್ಯ ಆರೋಪಿ ತಂದೆಯನ್ನು ಕಾಕತಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಬಾಲಕಿಗೆ ಚಿಕಿತ್ಸೆ ಮುಂದುವರೆದಿದೆ. ಇದಕ್ಕೆ ಸಂಬಂಧಿಸಿದಂತೆ ಈವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ತಿಳಿದುಬಂದಿದೆ.