Home latest Eastern Railway Recruitment 2022 :ಪೂರ್ವ ರೈಲ್ವೆಯಲ್ಲಿ ಭರ್ಜರಿ ಉದ್ಯೋಗಾವಕಾಶ | ಬರೋಬ್ಬರಿ 3115 ಹುದ್ದೆಗೆ...

Eastern Railway Recruitment 2022 :
ಪೂರ್ವ ರೈಲ್ವೆಯಲ್ಲಿ ಭರ್ಜರಿ ಉದ್ಯೋಗಾವಕಾಶ | ಬರೋಬ್ಬರಿ 3115 ಹುದ್ದೆಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆಗೆ ಅಕ್ಟೋಬರ್ 29 ಕೊನೆ ದಿನ

Hindu neighbor gifts plot of land

Hindu neighbour gifts land to Muslim journalist

ಪೂರ್ವ ರೈಲ್ವೆಯ ನೇಮಕಾತಿ ಮಂಡಳಿಯು ಇದೀಗ ಐಟಿಐ ಪಾಸಾದ ಅಭ್ಯರ್ಥಿಗಳಿಗೆ ಭರ್ಜರಿ ಉದ್ಯೋಗ ಆಫರ್ ನೀಡಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿಗೆ ಅಕ್ಟೋಬರ್ 29 ರವರೆಗೆ ಅವಕಾಶ ನೀಡಲಾಗಿದೆ.

ಅಪ್ರೆಂಟಿಸ್‌ ಡಿವಿಷನ್‌ವಾರು ಹುದ್ದೆಗಳ ವಿವರ
ಔರಾ ಡಿವಿಷನ್ : 659
ಲಿಲುಹ ವರ್ಕ್‌ಶಾಪ್‌: 612
ಸೀಲ್ದ ಡಿವಿಷನ್ : 440
ಕಂಚ್ರಪರ ವರ್ಕ್‌ಶಾಪ್‌: 187
ಮಾಲ್ಡ ಡಿವಿಷನ್ : 138
ಅಸನ್‌ಸೋಲ್ ವರ್ಕ್‌ಶಾಪ್‌: 412
ಜಮಲ್ಪುರ್ ವರ್ಕ್‌ಶಾಪ್‌ : 667

ವಿದ್ಯಾರ್ಹತೆ : ಅಭ್ಯರ್ಥಿಗಳು 10ನೇ ತರಗತಿ / ತತ್ಸಮಾನ ವಿದ್ಯಾರ್ಹತೆ ಜತೆಗೆ ಐಟಿಐ (ನ್ಯಾಷನಲ್ ಟ್ರೇಡ್ ಸರ್ಟಿಫಿಕೇಟ್) ಪಾಸ್ ಮಾಡಿರಬೇಕು. ವಿವಿಧ ಟ್ರೇಡ್‌ನಲ್ಲಿ ವ್ಯಾಸಂಗ ಮಾಡಿದವರು ಅರ್ಜಿ ಸಲ್ಲಿಸಬಹುದು.

ವಯೋಮಿತಿ : ಅರ್ಜಿ ಸಲ್ಲಿಸಲು ನಿಗದಿತ ಕೊನೆ ದಿನಾಂಕಕ್ಕೆ ಕನಿಷ್ಠ 15 ವರ್ಷ ಆಗಿರಬೇಕು.
ಗರಿಷ್ಠ 24 ವರ್ಷ ಮೀರದ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಒಬಿಸಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

ನೋಟಿಫಿಕೇಶನ್‌ ಪ್ರಕಟಿಸಲಾದ ದಿನಾಂಕ: 23-09-2022
ಆನ್‌ಲೈನ್‌ ಅರ್ಜಿಗೆ ಲಿಂಕ್ ಬಿಡುಗಡೆ ದಿನಾಂಕ: 30-09-2022
ಆನ್‌ಲೈನ್‌ ಅರ್ಜಿಗೆ ಕೊನೆ ದಿನಾಂಕ: 29-10-2022

ಅರ್ಜಿ ಸಲ್ಲಿಸುವ ವಿಧಾನ : ಆನ್‌ಲೈನ್

ಆಯ್ಕೆ ವಿಧಾನ : ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅವರು ಐಟಿಐ ಟ್ರೇಡ್‌ನಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಶಾರ್ಟ್‌ ಲಿಸ್ಟ್‌ ಮಾಡಿ, ದಾಖಲೆಗಳ ಪರಿಶೀಲನೆ / ಮೆಡಿಕಲ್ ಟೆಸ್ಟ್‌ ನಡೆಸಿ ನೇಮಕ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಶುಲ್ಕ ರೂ.100 ನಿಗದಿ ಮಾಡಲಾಗಿದೆ. ಎಸ್‌ಸಿ / ಎಸ್‌ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಪೂರ್ವ ರೈಲ್ವೆ ಆಕ್ಟ್ ಅಪ್ರೆಂಟಿಸ್ ಹುದ್ದೆಗಳನ್ನು ಫಿಟ್ಟರ್, ವೆಲ್ಡರ್, ಮೆಕ್ಯಾನಿಕಲ್, ಇಲೆಕ್ಟ್ರಿಕಲ್, ಪೇಂಟರ್, ಕಾರ್ಪೆಂಟರ್, ಮೆಕ್ಯಾನಿಕ್ ಮಷಿನ್ ಟೂಲ್, ಟರ್ನರ್, ವೈಯರ್‌ಮನ್, ರೆಫ್ರಿಜೆರೇಷನ್‌ ಟ್ರೇಡ್‌ಗಳಲ್ಲಿ ನೇಮಕ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗಳಿಗೆ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಓದಬಹುದು.