ಶನಿವಾರ, 24 ಅಕ್ಟೋಬರ್ 2026

ಬೆಳ್ಳಂಬೆಳಗ್ಗೆ ‘ಸಜ್ಜನ’ ರಾಜಕಾರಣಿ ಸತೀಶ್ ಜಾರಕಿಹೊಳಿ ಮನೆ ಮೇಲೆ ED ರೇಡ್!!

ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಮನೆಯ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಧಿಡೀರ್‌ ದಾಳಿಯೆಸಗಿದ್ದಾರೆ.

ಕಳೆದ ಜೂನ್ ತಿಂಗಳಿನಲ್ಲಿ ರಾಜ್ಯ ಲೋಕೋಪಯೋಗಿ (PWD) ಸಚಿವ ಸತೀಶ್ ಜಾರಕಿಹೊಳಿಅವರ ಆಪ್ತ ಸಂಬಂಧಿ ಹಾಗೂ ಅಬಕಾರಿ ಇಲಾಖೆ ಅಧಿಕಾರಿಯಾಗಿದ್ದ ವೈ. ಮಂಜುನಾಥ್ ನಿವಾಸದ ಮೇಲೆ ಇಡಿ ಅಧಿಕಾರಿಗಳು ಬೃಹತ್ ದಾಳಿ ನಡೆಸಿ ಶಾಕ್ ನೀಡಿದ್ದರು. ಆ ಘಟನೆಯ ಬಿಸಿ ಆರುವ ಮುನ್ನವೇ, ಇದೀಗ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ನೇರವಾಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದ ಮೇಲೆಯೇ ಬೆಳ್ಳಂಬೆಳಗ್ಗೆ ದಿಢೀರ್ ದಾಳಿ ನಡೆಸಿ ಮತ್ತೊಂದು ಬಿಗ್ ಶಾಕ್ ನೀಡಿದ್ದಾರೆ.

ವಿದೇಶದಲ್ಲಿ ಹಣ ಹೂಡಿಕೆಗೆ ಜಾರಕಿಹೊಳಿ ಸಹಾಯ ಮಾಡಿದ್ದ ಆರೋಪವಿದೆ. 3 ಕೋಟಿಯಷ್ಟು ಅಕ್ರಮ ವಿದೇಶಿ ಹಣ ಪತ್ತೆಯಾಗಿತ್ತು. ಸಚಿವರಾಗಿದ್ದಾಗ ಪ್ರಭಾವ ಬಳಸಿ 18 ಬಾರ್‌ ಲೈಸೆನ್ಸ್‌ ನೀಡಿದ್ದರು ಎನ್ನಲಾಗಿದೆ. ಬಾರ್‌ನಿಂದ ಅಕ್ರಮ ಹಣ ವರ್ಗಾವಣೆ ಆರೋಪದ ಹಿನ್ನೆಲೆ ಈಗ ದಾಳಿ ನಡೆದಿದೆ ಎಂದು ತಿಳಿದುಬಂದಿದೆ. ಆದರೆ ಈ ಬಗ್ಗೆ ಇನ್ನು ಯಾವುದೇ ನಿಖರವಾದ ಮಾಹಿತಿಗಳು ತಿಳಿದು ಬಂದಿಲ್ಲ.