Home Education ಗಮನಿಸಿ : ಶಿಕ್ಷಕರು, ಉಪನ್ಯಾಸಕರ ಮಕ್ಕಳಿಗೆ ಸಿಹಿಸುದ್ದಿ!

ಗಮನಿಸಿ : ಶಿಕ್ಷಕರು, ಉಪನ್ಯಾಸಕರ ಮಕ್ಕಳಿಗೆ ಸಿಹಿಸುದ್ದಿ!

Hindu neighbor gifts plot of land

Hindu neighbour gifts land to Muslim journalist

ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ, ಪ್ರೌಢ, ಪದವಿ ಹಾಗೂ ಸ್ನಾತಕೋತ್ತರ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರ/ ಉಪನ್ಯಾಸಕರು , ಪ್ರಾಂಶುಪಾಲರು, ನಿವೃತ್ತ ಶಿಕ್ಷಕರು, ನಿವೃತ್ತ ಉಪನ್ಯಾಸಕರು ಮಕ್ಕಳಿಗೆ ನಿವೃತ್ತ ಪ್ರಾಂಶುಪಾಲರ ಮಕ್ಕಳಿಗೆ ವಿದ್ಯಾರ್ಥಿವೇತನ ವನ್ನು ಮಂಜೂರು ಮಾಡುವ ಸಲುವಾಗಿ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಮುಖ್ಯವಾಗಿ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ, ಪ್ರೌಢ, ಪದವಿ ಹಾಗೂ ಸ್ನಾತಕೋತ್ತರ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರ/ ಉಪನ್ಯಾಸಕರ ಮಕ್ಕಳು ಈ ಧನಸಹಾಯಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಅಲ್ಲದೆ ಶಿಕ್ಷಕರ/ ಉಪನ್ಯಾಸಕರ ಮಕ್ಕಳು 1 ರಿಂದ 10ನೇ ತರಗತಿಯವರೆಗೆ ಸರ್ಕಾರಿ ಅಥವಾ ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡಿರುವ ಮಕ್ಕಳು ಮಾತ್ರ ಈ ಧನಸಹಾಯಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ರಾಜ್ಯದ ಶಿಕ್ಷಕರ ಮಕ್ಕಳ ಉನ್ನತ ವ್ಯಾಸಂಗ ಧನಸಹಾಯಕ್ಕೆ ಅರ್ಜಿ ಆಹ್ವಾನ:

2021-22ನೇ ಸಾಲಿನಲ್ಲಿ ವೈದ್ಯಕೀಯ ಹಾಗೂ ಇಂಜಿನಿಯರಿಂಗ್ ವೃತ್ತಿಪರ ಶಿಕ್ಷಣ ಕೋರ್ಸ್, ಸ್ನಾತಕೋತ್ತರ ಪದವಿ ಒಳಗೊಂಡಂತೆ ವ್ಯಾಸಂಗ ಪೂರ್ಣಗೊಳಿಸಿದ್ದು, ರಾಷ್ಟ್ರೀಕೃತ ಬ್ಯಾಂಕ್‌ನಿಂದ ಶೈಕ್ಷಣಿಕ ಸಾಲ ಪಡೆದ ಶಿಕ್ಷಕರ/ ಉಪನ್ಯಾಸಕರ ಮಕ್ಕಳಿಗೆ ಧನಸಹಾಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ವೈದ್ಯಕೀಯ ಹಾಗೂ ಇಂಜಿನಿಯರಿಂಗ್ ಸಂಬಂಧಿಸಿದ ವೃತ್ತಿಪರ ಶಿಕ್ಷಣ ಕೋರ್ಸ್‌ಗಳ ಉನ್ನತ ವ್ಯಾಸಂಗಕ್ಕೆ ಶಿಕ್ಷಕರು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಶೈಕ್ಷಣಿಕ ಸಾಲ ಪಡೆದಿದ್ದಲ್ಲಿ ಮಾತ್ರ ಅಂತಹ ಶಿಕ್ಷಕರ ಮಕ್ಕಳಿಗೆ ಪ್ರೋತ್ಸಾಹ ನೀಡುವ ಮತ್ತು ವ್ಯಾಸಂಗಕ್ಕೆ ತಗಲುವ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಈ ಧನಸಹಾಯ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು:

  • ನಿಧಿಗಳ ಕಛೇರಿಯಿಂದ ಅಜೀವ ಸದಸ್ಯತ್ವ ಹೊಂದಿರುವ ಸರ್ಕಾರಿ ಅನುದಾನಿತ ಪ್ರಾಥಮಿಕ, ಪ್ರೌಢ, ಪದವಿ ಹಾಗೂ ಸ್ನಾತಕೋತ್ತರ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರ/ ಉಪನ್ಯಾಸಕರ ಮಕ್ಕಳಿಗೆ ಮಾತ್ರ ಈ ಧನಸಹಾಯ ನೀಡಲಾಗುತ್ತದೆ.
  • ನಿವೃತ್ತ ಶಿಕ್ಷಕರಿಗೆ ಈ ಧನಸಹಾಯ ಅನ್ವಯಿಸುವುದಿಲ್ಲ.
  • LMS ಕಾರ್ಡ್‌ ಧೃಡಿಕರಿಸಿ ಲಗತ್ತಿಸಬೇಕು.
  • ಅನುದಾನಿತ ಶಾಲಾ ಶಿಕ್ಷಕರು / ಉಪನ್ಯಾಸಕರಾಗಿದ್ದಲ್ಲಿ HRMS ಪ್ರತಿ ಅಥವಾ ನೇಮಕಾತಿ ಅನುಮೋದನೆ ಪ್ರತಿಯನ್ನು ಸಂಬಂಧಿಸಿದ ಶಾಲಾ ಕಾಲೇಜು ಮುಖ್ಯಸ್ಥರಿಂದ ದೃಢೀಕರಿಸಿ ಸಲ್ಲಿಸುವುದು.
  • ಅರ್ಜಿ ಹಾಕಲು ವೃತ್ತಿಪರ ಶಿಕ್ಷಣದಲ್ಲಿ ಪ್ರತಿ ವರ್ಷ/ ಪ್ರತಿ ಸೆಮಿಸ್ಟರ್ ನಲ್ಲಿ ಪ್ರಥಮ ಪ್ರಯತ್ನದಲ್ಲೇ ಉತ್ತೀರ್ಣರಾಗಿರುವುದು ಕಡ್ಡಾಯ.
  • ವಿದ್ಯಾರ್ಥಿಗಳು ವೈದ್ಯಕೀಯ, ಇಂಜಿನಿಯರಿಂಗ್ ಹಾಗೂ ಸ್ನಾತಕೋತ್ತರ ಪದವಿಗಳಿಗೆ ಸಂಬಂಧಿಸಿದಂತೆ, ಭಾರತದ ಯಾವುದೇ ರಾಜ್ಯದಲ್ಲಿ ವ್ಯಾಸಂಗ ಮಾಡಲು ಯಾವುದೇ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಶೈಕ್ಷಣಿಕ ಸಾಲ ಪಡೆದಿದ್ದಲ್ಲಿ ಅಂತಹ ವಿದ್ಯಾರ್ಥಿಗಳು ಧನಸಹಾಯಕ್ಕೆ ಅರ್ಹರೆಂದು ಪರಿಗಣಿಸಲಾಗುವುದು.
  • ಬ್ಯಾಂಕ್‌ಗಳಲ್ಲಿ ಎಷ್ಟೇ ಮೊತ್ತದ ಶೈಕ್ಷಣಿಕ ಸಾಲ ಪಡೆದಿದ್ದರೂ ನಿಧಿಗಳ ಕಛೇರಿಯಿಂದ ಬ್ಯಾಂಕ್ ವಿಧಿಸಿದ ಬಡ್ಡಿ ಹಣಕ್ಕೆ ಮಾತ್ರ ಗರಿಷ್ಠ ರೂ. 50,000/- ಗಳ ಧನಸಹಾಯವನ್ನು ಒಂದು ಬಾರಿಗೆ ಮಾತ್ರ ನೀಡಲಾಗುವುದು.
  • 2021-22ನೇ ಸಾಲಿನಲ್ಲಿ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡಿರುವ ವಿದ್ಯಾರ್ಥಿಗಳು ಮಾತ್ರ ಈ ಧನಸಹಾಯವನ್ನು ಪಡೆಯಲು ಅರ್ಹರಾಗಿರುತ್ತಾರೆ.
  • ಒಂದು ಕುಟುಂಬಕ್ಕೆ ಒಬ್ಬ ವಿದ್ಯಾರ್ಥಿಗೆ ಮಾತ್ರ ಧನಸಹಾಯ ನೀಡಲಾಗುವುದು. ವಿದ್ಯಾರ್ಥಿಯ ತಂದೆ/ ತಾಯಿ/ ಇಬ್ಬರೂ ಶಿಕ್ಷಕರು/ ಉಪನ್ಯಾಸಕರಾಗಿದ್ದಲ್ಲಿ ಕುಟುಂಬಕ್ಕೆ ಇಬ್ಬರು ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.
  • ವಿದ್ಯಾರ್ಥಿಯ ತಂದೆ/ ತಾಯಿ/ ಇಬ್ಬರೂ ಶಿಕ್ಷಕರು/ ಉಪನ್ಯಾಸಕರಾಗಿದ್ದಲ್ಲಿ ಕುಟುಂಬಕ್ಕೆ ಇಬ್ಬರು ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.
  • ಈ ಮೇಲಿನ ದಾಖಲೆಗಳೊಂದಿಗೆ ದಿನಾಂಕ 28-02-2023 ರೊಳಗೆ ಅರ್ಜಿ ಸಲ್ಲಿಸುವಂತೆ ತಿಳಿಸಲಾಗಿದೆ.
  • ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಪ್ರತಿಗಳಿಗಾಗಿ ವಿದ್ಯಾರ್ಥಿಗಳು ಶಿಕ್ಷಣ ಇಲಾಖೆ ಅಧಿಕೃತ ವೆಬ್‌ಸೈಟ್‌ https://www.schooleducation.kar.nic.in ಗೆ ಭೇಟಿ ನೀಡಬಹುದು.

ಈ ಮೇಲಿನ ನಿಯಮ ಅನುಸಾರ ಅರ್ಹ ಅಭ್ಯರ್ಥಿಗಳು ಅರ್ಜಿ ಹಾಕಿ ವಿದ್ಯಾರ್ಥಿ ವೇತನ ಸೌಲಭ್ಯ ಪಡೆದುಕೊಳ್ಳಬಹುದಾಗಿದೆ.