Home News Encounter: 12 ನಕ್ಸಲರ ಎನ್‌ಕೌಂಟರ್ ; ಇಬ್ಬರು ಭದ್ರತಾ ಸಿಬ್ಬಂದಿ ಸಾವು

Encounter: 12 ನಕ್ಸಲರ ಎನ್‌ಕೌಂಟರ್ ; ಇಬ್ಬರು ಭದ್ರತಾ ಸಿಬ್ಬಂದಿ ಸಾವು

Hindu neighbor gifts plot of land

Hindu neighbour gifts land to Muslim journalist

Encounter: ಛತ್ತೀಸ್‌ಗಢದ (Chhattisgarh) ಬಿಜಾಪುರ ಜಿಲ್ಲೆಯ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ ಭದ್ರತಾ ತಂಡ ಮಾವೋವಾದಿ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದಾಗ, ಭದ್ರತಾ ಸಿಬ್ಬಂದಿ (Security Personnel) ಹಾಗೂ ನಕ್ಸಲರ (Maoists) ನಡುವೆ ನಡೆದ ಎನ್‌ಕೌಂಟರ್‌ನಲ್ಲಿ (Encounter) 12 ನಕ್ಸಲರು ಬಲಿಯಾಗಿದ್ದು, ಇಬ್ಬರು ಭದ್ರತಾ ಸಿಬ್ಬಂದಿ ಸಾವನ್ನಪ್ಪಿದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಎನ್‌ಕೌಂಟರ್‌ನಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ ನಕ್ಸಲರ ಗುರುತನ್ನು ಪತ್ತೆಹಚ್ಚಲಾಗುತ್ತಿದೆ. ಘಟನಾ ಸ್ಥಳದಿಂದ ಭದ್ರತಾ ಪಡೆ ಸಿಬ್ಬಂದಿ ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ಸಂಬಂಧ ಶೋಧ ಕಾರ್ಯಾಚರಣೆ ಮುಂದುವರಿದಿದ್ದು, ಎನ್‌ಕೌಂಟರ್ ಸ್ಥಳಕ್ಕೆ ಹೆಚ್ಚಿನ ಪಡೆಗಳನ್ನು ರವಾನಿಸಲಾಗಿದೆ ಎಂದು ವರದಿಗಳು ತಿಳಿಸಿವೆ.