Home Education KARTET 2022 : ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಸೂಚನೆ ಬಿಡುಗಡೆ :...

KARTET 2022 : ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಸೂಚನೆ ಬಿಡುಗಡೆ : ಈ ನಿಯಮ ಪಾಲನೆ ಮಾಡುವುದು ಕಡ್ಡಾಯ !!!

Hindu neighbor gifts plot of land

Hindu neighbour gifts land to Muslim journalist

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅಧಿಸೂಚನೆಯಂತೆ ಅಭ್ಯರ್ಥಿಗಳ ಪ್ರವೇಶ ಪತ್ರ ಬಿಡುಗಡೆ ಮಾಡಲಾಗಿದ್ದು, ಅಭ್ಯರ್ಥಿಗಳು ಸಾರ್ವಜನಿಕ ಶಿಕ್ಷಣ ಇಲಾಖೆಯ ವೆಬ್‌ಸೈಟ್‌ಗೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದಾಗಿದೆ. ಟಿಇಟಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಸೂಚನೆಗಳು ಬಿಡುಗಡೆ ಮಾಡಲಾಗಿದ್ದು, ಇವುಗಳನ್ನು ಪಾಲನೆ ಮಾಡುವುದು ಕಡ್ಡಾಯವಾಗಿದೆ.

ರಾಜ್ಯದಾದ್ಯಂತ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET-2022) ದಿನಾಂಕ 06-11-2022ರ ಭಾನುವಾರದಂದು ಎರಡು ಅಧಿವೇಶನಗಳಲ್ಲಿ ನಡೆಯಲಿದೆ. ಈ ದಿನದಂದು, ಪತ್ರಿಕೆ-1, ಪತ್ರಿಕೆ -2, ಎರಡು ಪರೀಕ್ಷೆಗಳನ್ನು ನಡೆಸಲಾಗುತ್ತದೆ.

ಪತ್ರಿಕೆ-1 ಪರೀಕ್ಷೆಯು ಬೆಳಗ್ಗೆ 9.30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ನಡೆಯುತ್ತದೆ. ಹಾಗೂ ಪತ್ರಿಕೆ -2 ಪರೀಕ್ಷೆಯು ಮಧ್ಯಾಹ್ನ 2 ರಿಂದ ಸಂಜೆ 4.30ರ ವರೆಗೆ ನಡೆಸಲು ನಿರ್ಧರಿಸಲಾಗಿದೆ..

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಸೂಚನೆಗಳು ಹೀಗಿದೆ:

ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಪ್ರತಿ ಅಧಿವೇಶನದ ಪರೀಕ್ಷಾ ಪ್ರಾರಂಭದ ಅವಧಿಗಿಂತ ಒಂದು ಗಂಟೆ ಮುಂಚಿತವಾಗಿ ಹಾಜರಿರಬೇಕಾಗಿದೆ.

ಪ್ರವೇಶ ಪತ್ರವಿಲ್ಲದ ಯಾವುದೇ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶವಿರುವುದಿಲ್ಲ. ಈ ಬಗ್ಗೆ ಯಾವುದೇ ವಿನಾಯಿತಿ ಇರುವುದಿಲ್ಲ.

ಪರೀಕ್ಷೆಯನ್ನು ಅತ್ಯಂತ ಕಟ್ಟುನಿಟ್ಟಾಗಿ ನಡೆಸಲಾಗಲಿದ್ದು, ಎಲ್ಲಾ ಅಭ್ಯರ್ಥಿಗಳನ್ನು ಪರೀಕ್ಷಾ ಕೇಂದ್ರದಲ್ಲಿ ತಪಾಸಣೆಗೆ ಒಳಪಡಿಸಲಾಗುತ್ತದೆ.

ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಪಡೆದ ಮೇಲೆ ತಮಗೆ ನೀಡಿದ ಪರೀಕ್ಷಾ ಕೇಂದ್ರಕ್ಕೆ ಒಂದು ದಿನ ಮುಂಚಿತವಾಗಿ ಭೇಟಿ ನೀಡಿ ಯಾವುದೇ ಗೊಂದಲಗಳಿಗೆ ಅವಕಾಶವಿಲ್ಲದಂತೆ ಸರಿಯಾದ ವಿಳಾಸವನ್ನು ಖಾತ್ರಿಪಡಿಸಿಕೊಳ್ಳತಕ್ಕದ್ದು.

ಕೈ ಗಡಿಯಾರ, ಮೊಬೈಲ್, ಕ್ಯಾಲ್‌ಕ್ಯುಲೇಟರ್, ಬ್ಲೂಟೂತ್ ಹಾಗೂ ಇತರೆ ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ಮತ್ತು ಲಾಗ್‌ಟೇಬಲ್, ಬಿಳಿ ಪ್ಲೂಯಡ್, ಬೆಂಕಿಪೊಟ್ಟಣ ಅಥವಾ ಸಿಗರೇಟ್ ಲೈಟರ್ ಮುಂತಾದ ವಸ್ತುಗಳನ್ನು ಪರೀಕ್ಷಾ ಕೊಠಡಿಯೊಳಗೆ ತರುವುದನ್ನು ನಿಷೇಧಿಸಲಾಗಿದೆ.

ಒಮ್ಮೆ ಅಭ್ಯರ್ಥಿಯು ಪರೀಕ್ಷಾ ಕೊಠಡಿ ಪ್ರವೇಶಿಸಿದ ನಂತರ ಪರೀಕ್ಷೆ ಮುಗಿಯುವವರೆವಿಗೂ ಯಾವುದೇ ಕಾರಣಕ್ಕೂ ಪರೀಕ್ಷಾ ಕೇಂದ್ರದಿಂದ ಹೊರಗೆ ಹೋಗಲು ಅವಕಾಶವಿರುವುದಿಲ್ಲ.

ಪೂರ್ವ ಮುದ್ರಿತ ಓಎಂಆರ್ ನಲ್ಲಿ ಅಭ್ಯರ್ಥಿಯ ಅರ್ಜಿಯಲ್ಲಿನ ಮುಖ್ಯ ಅಂಶಗಳು ಪೂರ್ವ ಮುದ್ರಿತವಾಗಿರುವುದರಿಂದ ತನ್ನದೇ ಓಎಂಆರ್ ಎಂಬುದನ್ನು ಖಾತ್ರಿ ಪಡಿಸಿಕೊಳ್ಳಬೇಕಾಗಿದೆ.

ಪೂರ್ವ ಮುದ್ರಿತ ಓಎಂಆರ್ ನ ಕೆಳೆಗೆ ನಿಗದಿಪಡಿಸಿರುವ ಚೌಕದಲ್ಲಿ ಅಭ್ಯರ್ಥಿಯು ಸಹಿ ಮಾಡಬೇಕು, ಸಹಿಯು ಅರ್ಜಿಯಲ್ಲಿ ಹಾಕಿರುವ ಸಹಿಗೆ ಹೋಲಿಕೆಯಾಗಬೇಕು ಮತ್ತು ಎಡಗೈ ಹೆಬ್ಬೆರಳಿನ ಗುರುತನ್ನು ಸ್ಪಷ್ಟವಾಗಿ ಒತ್ತಬೇಕು.ನಂತರ ತಮ್ಮ ಕೊಠಡಿ ಮೇಲ್ವಿಚಾರಕರಿಂದ ಪೂರ್ವ ಮುದ್ರಿತ ಓಎಂಆರ್‌ನಲ್ಲಿ ಸಹಿಯನ್ನು ಮಾಡಿಸಿಕೊಳ್ಳಬೇಕು.

ಪರೀಕ್ಷೆ ಪ್ರಾರಂಭವಾಗುವ 30 ನಿಮಿಷಗಳ ಮೊದಲು ಅಭ್ಯರ್ಥಿಗಳಿಗೆ ಪರೀಕ್ಷಾ ಕೊಠಡಿಗೆ ಪ್ರವೇಶವನ್ನು ನೀಡಲಾಗುತ್ತದೆ. ಪರೀಕ್ಷಾ ಪ್ರಾರಂಭವಾದ ಬೆಳಗ್ಗೆ 9.30, ಮಧ್ಯಾಹ್ನ 2.00 ಗಂಟೆಯ ನಂತರ ಪರೀಕ್ಷಾ ಕೇಂದ್ರದೊಳಗೆ ಪ್ರವೇಶಿಸಲು ಅವಕಾಶವಿರುವುದಿಲ್ಲ.

ಅಭ್ಯರ್ಥಿಗಳ ಸಹಿ ಮತ್ತು ಹೆಬ್ಬೆಟ್ಟಿನ ಗುರುತು ಹಾಗೂ ಕೊಠಡಿ ಮೇಲ್ವಿಚಾರಕರ ಸಹಿ ಇಲ್ಲದಿರುವ ಓಎಂಆರ್‌ಗಳನ್ನು ಮೌಲ್ಯಮಾಪನಕ್ಕೆ ಪರಿಗಣಿಸಲಾಗುವುದಿಲ್ಲ.

ಪರೀಕ್ಷೆ ಬೆಲ್‌ ನಂತರ ಬರುವ ಯಾವುದೇ ಅಭ್ಯರ್ಥಿಗಳಿಗೆ ಪರೀಕ್ಷೆಗೆ ಪ್ರವೇಶ ನೀಡುವುದಿಲ್ಲ.

ಪರೀಕ್ಷಾ ಕೊಠಡಿಯೊಳಕ್ಕೆ ಉತ್ತರಿಸಲು ಬೇಕಾದ ನೀಲಿ ಅಥವಾ ಕಪ್ಪು ಶಾಯಿಯ ಬಾಲ್‌ಪಾಯಿಂಟ್‌ ಪೆನ್ ಮತ್ತು ಗಣಿತಕ್ಕೆ ಸಂಬಂಧಿಸಿದ ಜಾಮೀಟ್ರಿ ಪರಿಕರಗಳನ್ನು ಮಾತ್ರ ಪ್ರವೇಶ ಪತ್ರದೊಂದಿಗೆ ತೆಗೆದುಕೊಂಡು ಹೋಗಲು ಅವಕಾಶವಿರುತ್ತದೆ.

ವಿಶೇಷ ಚೇತನ ಅಭ್ಯರ್ಥಿಗಳಿಗೆ ಸೂಚನೆಗಳು

ವಿಶೇಷ ಚೇತನ ಅಭ್ಯರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಆಸನ ವ್ಯವಸ್ಥೆಯನ್ನು ಮಾಡಲಾಗಿರುತ್ತದೆ.

ವಿಶೇಷ ಚೇತನ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಅಂಗವಿಕಲತೆಯ ಪ್ರಮಾಣಪತ್ರವನ್ನಾಧರಿಸಿ ಪರೀಕ್ಷೆ ಬರೆಯಲು ಒಂದು ಗಂಟೆಗೆ 20 ನಿಮಿಷಗಳಂತೆ 50 ನಿಮಿಷ ಹೆಚ್ಚಿನ ಕಾಲಾವಕಾಶವನ್ನು ನೀಡಲಾಗುವುದು.ಆನ್‌ಲೈನ್‌ ಅರ್ಜಿ ಸಲ್ಲಿಸುವಾಗ ಸಹಾಯಕ ಬರಹಗಾರರ (Scribe) ನ್ನು ಕೋರಿರುವವರು ಒಂದು ದಿನ ಮುಂಚಿತವಾಗಿ ಸಂಬಂಧಿಸಿದ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರನ್ನು ಭೇಟಿ ಮಾಡಿ ವಿವರಗಳನ್ನು ಸಲ್ಲಿಸಬೇಕಾಗುತ್ತದೆ.

ಅಭ್ಯರ್ಥಿಗಳು ಸೂಚನೆಗಳನ್ನು ಕೂಲಂಕಷವಾಗಿ ಓದಿ ಅರ್ಥೈಸಿಕೊಂಡು, ಅದರಂತೆ ಸಿದ್ಧತೆಯೊಂದಿಗೆ ಪರೀಕ್ಷೆಗೆ ಹಾಜರಾಗುವಂತೆ ತಿಳಿಸಲಾಗಿದೆ.

ಆಯಾ ಜಿಲ್ಲೆಯ ಪರೀಕ್ಷೆ ನೋಡಲ್ ಅಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಬಹುದಾಗಿದ್ದು, ಪರೀಕ್ಷಾ ಕೇಂದ್ರಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಳ ಅಗತ್ಯವಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ