ಶನಿವಾರ, 24 ಅಕ್ಟೋಬರ್ 2026

ಜೈಲಿಗೆ ಹಾಕಿ, ನೇಣು ಹಾಕಿದ್ರೂ ನಾವು ‘ವಂದೇ ಮಾತರಂ’ ಗೀತೆಯ 2 ಪ್ಯಾರಾ ಮಾತ್ರ ಹಾಡೋದು – ಬಿ.ಕೆ.ಹರಿಪ್ರಸಾದ್‌

ನೇಣು ಹಾಕಿದರೂ, ಜೈಲಿಗೆ ಹಾಕಿದರೂ ನಾವು ಹಾಡುವುದು ನಾವು ಕಾಂಗ್ರೆಸ್‌ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಗೀತೆಯನ್ನು ಪೂರ್ಣವಾಗಿ ಹಾಡುವುದಿಲ್ಲ. ಎರಡು ಪ್ಯಾರಾಗಳನ್ನಷ್ಟೇ ಹಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಸ್ಪಷ್ಟಪಡಿಸಿದ್ದಾರೆ. 

ಸೋನಿಯಾ ಗಾಂಧಿ ಅವರು ವಂದೇ ಮಾತರಂಗೆ ಅಪಮಾನ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಪ್ರತಿಕ್ರಿಯಿಸಿದ ಹರಿಪ್ರಸಾದ್ “ವಂದೇ ಮಾತರಂ ಅನ್ನು ಕಡ್ಡಾಯಗೊಳಿಸುವ ಮೂಲಕ ರಾಷ್ಟ್ರಗೀತೆ ‘ಜನಗಣಮನ’ವನ್ನು ಎರಡನೇ ದರ್ಜೆಗೆ ತರುವ ಪ್ರಯತ್ನ ನಡೆಯುತ್ತಿದೆ. ರಾಷ್ಟ್ರಗೀತೆ, ರಾಷ್ಟ್ರಧ್ವಜ ಹಾಗೂ ರಾಷ್ಟ್ರಚಿಹ್ನೆಗೆ ಬಿಜೆಪಿ ಮತ್ತು ಆರ್‌ಎಸ್‌ಎಸ್ ಅಪಮಾನ ಮಾಡಿದೆ. ವಂದೇ ಮಾತರಂಗೆ ಕಾಂಗ್ರೆಸ್‌ ವಿರೋಧವಿಲ್ಲ ಎಂದಿರುವ ಅವರು,  ಹಾಕಿದರೂ, ಜೈಲಿಗೆ ಹಾಕಿದರೂ ನಾವು ಬಂಕಿಮಚಂದ್ರ ಚಟರ್ಜಿ ಬರೆದಿರುವ ಗೀತೆಯ ಎರಡು ಪ್ಯಾರಾಗಳನ್ನು ಮಾತ್ರ ಕಾಂಗ್ರೆಸ್‌ ಕಾರ್ಯಕ್ರಮಗಳಲ್ಲಿ ಹಾಡುತ್ತೇವೆ.  ಎಂದು ಹೇಳಿದ್ದಾರೆ.

‘ಸದಾ ವತ್ಸಲೇ’ಯನ್ನು ರಾಷ್ಟ್ರಗೀತೆ ಎಂದು ಪರಿಗಣಿಸಬಹುದೇ ಎಂದು ಪ್ರಶ್ನಿಸಿದರು. ‘ಆಜಾದ್ ಹಿಂದ್ ಜಿಂದಾಬಾದ್, ಇಂಕಲಾಬ್ ಜಿಂದಾಬಾದ್ ಘೋಷಣೆಗಳನ್ನು ಬಿಜೆಪಿಯವರು ಕೂಗುತ್ತಾರೆಯೇ’ ಎಂದು ಪ್ರಶ್ನಿಸಿದ ಅವರು, ವಂದೇ ಮಾತರಂ ವಿಚಾರವನ್ನು ಮುಂದಿಟ್ಟುಕೊಂಡು ದೇಶದಲ್ಲಿ ಸೌಹಾರ್ದತೆ ಹಾಳು ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.