Home News ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಕಡಬ ಘಟಕ ಉದ್ಘಾಟನೆ

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಕಡಬ ಘಟಕ ಉದ್ಘಾಟನೆ

Hindu neighbor gifts plot of land

Hindu neighbour gifts land to Muslim journalist

ಕಡಬ : ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಕಡಬ ತಾಲೂಕು ಘಟಕದ ಉದ್ಘಾಟನಾ ಸಮಾರಂಭ ಮರ್ಧಾಳ ಅಂಬೇಡ್ಕರ್ ಭವನದಲ್ಲಿ ಬುಧವಾರ ನಡೆಯಿತು.

ಉದ್ಘಾಟನೆ ನೆರವೇರಿಸಿದ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ರಾಜ್ಯಾಧ್ಯಕ್ಷ ಡಾ|ಶಿವಣ್ಣ ಎನ್.ಕೆ ಮಾತನಾಡಿ ದೇಶ ಕಾಯುವ ಕಾಯಕವನ್ನು ಅತ್ಯಂತ ಪ್ರಾಮಾಣಿಕತೆಯಿಂದ ನಿರ್ವಹಿಸಿ ನಿವೃತ್ತಿ ಜೀವನ ನಡೆಸುತ್ತಿರುವ ಮಾಜಿ ಸೈನಿಕರಿಗೆ ಸೂಕ್ತ ಸ್ಥಾನ ಮಾನ ಸಿಗುವಂತಾಗಬೇಕಾದರೆ ನಾವೆಲ್ಲಾ ಒಗ್ಗಟ್ಟಾಗಬೇಕು, ಸರಕಾರದಿಂದ ನಮಗೆ ಸಿಗಬೆಕಾದ ಸವಲತ್ತುಗಳಿಗಾಗಿ ನಾವು ಸಂಘಟಿತರಾಗಿ ಹೋರಾಡಬೇಕಾಗಿದೆ.

ಸಂಘಟನೆಯ ಮುಖಾಂತರ ನಿವೃತ್ತ ಸೈನಿಕರ ಹಿತಕಾಯುವಲ್ಲಿ ಮುಂದಾಬೇಕು, ದೇಶದಲ್ಲಿ ಮಾಜಿ ಸೈನಿಕರು ಕೇವಲ ಗಣರಾಜ್ಯೋತ್ಸವ, ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ಸೀಮಿತವಾಗದೆ ಸಮಾಜದಲ್ಲಿ ಗೌರಯುತ ಸ್ಥಾನ ಪಡೆಯುವಂತಾಗಬೇಕು ಎಂದು ಹೇಳಿ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಮರ್ಧಾಳದ ಸೈನಿಕ ಪುರುಷೋತ್ತಮ ಎಂಬವರ ಮನೆಗೆ ಸರಿಯಾದ ದಾರಿ, ವಿದ್ಯುತ್ ಇಲ್ಲ, ಸಂಬಂಧಪಟ್ವರ ಗಮನಕ್ಕೆ ತಂದರೂ ಯಾವುದೇ ಕ್ರಮ, ಕೈಗೊಳ್ಳದಿರುವುದು ಖಂಡನೀಯ , ಅವರಿಗೆ ನ್ಯಾಯ ಒದಗಿಸಕೊಡದಿದ್ದರೆ ಉಗ್ರ ಹೋರಾಟ ಮಾಡಲಾಗುವುದು, ಮಂಗಳೂರಿನ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಛೇರಿ ತನಕ ಪಾದಯಾತ್ರೆ ಮಾಡಿ ಬಳಿಕ ಪ್ರತಿಭಟನೆ ಸಲ್ಲಿಸಲಾಗುವುದು ಎಂದು ಎಚ್ಚರಿಸಿದರು.

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಕಡಬ ಘಟಕದ ಅಧ್ಯಕ್ಷ ಮ್ಯಾಥ್ಯೂ ಟಿ.ಜೆ ಸಭೆಯ ಅಧ್ಯಕ್ಷತೆವಹಿಸಿದ್ದರು. ಸಂಘದ ಕೊಡಗು ಜಿಲ್ಲಾಧ್ಯಕ್ಷ ಸೋಮಣ್ಣ, ದ.ಕ ಜಿಲ್ಲಾ ಘಟಕದ ಕಾರ್ಯದರ್ಶಿ ಗೋಪಾಲಕೃಷ್ಣ ಸದಸ್ಯ ತಂಗಚ್ಚನ್, ಬೆಂಗಳೂರು ಜಿಲ್ಲಾಧ್ಯಕ್ಷ ವೇಣು, ಉಪಾಧ್ಯಕ್ಷ ವಾಸು, ಕಾರ್ಯದರ್ಶಿ ಪ್ರವೀಣ್, ಮಾಜಿ ಸೈನಿಕ ಸುಬ್ರಾಯ ಬೈಪಡಿತ್ತಾಯ, ಸಾಮಾಜಿಕ ಕಾರ್ಯಕರ್ತ ಅನೂಪ್ ಕುಮಾರ್ ಜೈನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಮಾರಂಭದ ಬಳಿಕ ಸೈನಿಕ ಪುರುಷೋತ್ತಮ್ ಅವರ ಮನೆಗೆ ಭೇಟಿ ನಿಡಿದ ಸಂಗದ ಮುಖಂಡರು ಪರಿಸ್ಥಿತಿಯ ಅವಲೋಕ ಮಾಡಿದರು. ಬಳಿಕ ಕಡಬ ತಹಶಿಲ್ದಾರ್ ಅವರಿಗ ಮನವಿ ಸಲ್ಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅಗ್ರಹಿಸಿದರು.