ಗುರುವಾಯನಕೆರೆ, ಜೂನ್ 23: ಎಕ್ಸೆಲ್ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ನೂತನ ವಿದ್ಯಾರ್ಥಿಗಳಿಗಾಗಿ “ಸ್ವಾಗತಂ – 2026-27” ಸ್ವಾಗತ ಹಾಗೂ ಪರಿಚಯ ಕಾರ್ಯಕ್ರಮವನ್ನು ಕುಶಲೋಪರಿಯಾಗಿ ಆಯೋಜಿಸಲಾಯಿತು. ಕಾರ್ಯಕ್ರಮವು ಕುುವೆಂಪು ಸಭಾಂಗಣದಲ್ಲಿ ನಡೆಯಿತು.
Sponsoredಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಕ್ಸೆಲ್ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಶ್ರೀ ಸುಮಂತ್ ಕುಮಾರ್ ಜೈನ್ ಬಿ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಪ್ರೊ. ಪದ್ಮನಾಭ ಕೆ, ಪ್ರಾಂಶುಪಾಲರು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ತಂಗಡಿ ಭಾಗವಹಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಉನ್ನತ ಶಿಕ್ಷಣದಲ್ಲಿ ವಾಣಿಜ್ಯ ಶಿಕ್ಷಣದ ಮಹತ್ವ, ಉದ್ಯೋಗಾವಕಾಶಗಳು ಹಾಗೂ ವ್ಯಕ್ತಿತ್ವ ವಿಕಸನದ ಕುರಿತು ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.
ಅಧ್ಯಕ್ಷೀಯ ಭಾಷಣದಲ್ಲಿ ಶ್ರೀ ಸುಮಂತ್ ಕುಮಾರ್ ಜೈನ್ ಬಿ ಅವರು, ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಶಿಸ್ತು, ಮೌಲ್ಯಗಳು ಮತ್ತು ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕೆಂದು ತಿಳಿಸಿದರು. ಸಂಸ್ಥೆಯು ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸುತ್ತಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯ ಯಶಸ್ಸಿಗಾಗಿ ಸದಾ ಬೆಂಬಲವಾಗಿ ನಿಲ್ಲುವುದಾಗಿ ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ವಿದ್ಯಾಸಾಗರ ಕ್ಯಾಂಪಸ್ನಾ ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿ, ಕಾಲೇಜು ಜೀವನವನ್ನು ಸಾರ್ಥಕವಾಗಿ ರೂಪಿಸಿಕೊಳ್ಳುವಂತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ವಾಣಿಜ್ಯ ವಿಭಾಗದ ಡೀನ್ ಶ್ರೀ ಸಂತೋಷ್ ಕೆ ಕೆ ಇವರು ಕಾಲೇಜಿನ ಶೈಕ್ಷಣಿಕ ಸಾಧನೆ ಹಾಗೂ ನೂತನ ವಿದ್ಯಾರ್ಥಿಗಳಿಗೆ ಕಾಲೇಜಿನ ಶೈಕ್ಷಣಿಕ ಚಟುವಟಿಕೆಗಳು, ವಿಭಾಗದ ಕಾರ್ಯಪದ್ಧತಿ ಹಾಗೂ ಭವಿಷ್ಯದ ಅವಕಾಶಗಳ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ SSLC ಸಾಧಕರನ್ನು ಗೌರವಿಸಲಾಯಿತು.
ಕಾರ್ಯಕ್ರಮವು ನೂತನ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮತ್ತು ಉತ್ಸಾಹವನ್ನು ತುಂಬಿ, ಕಾಲೇಜು ಜೀವನದ ಹೊಸ ಅಧ್ಯಾಯಕ್ಕೆ ಸಾರ್ಥಕ ಚಾಲನೆ ನೀಡಿತು.
ಕುಮಾರಿ ಅಮನ್ನ ಅಮೀನಾ ಕಾರ್ಯಕ್ರಮ ನಿರೂಪಿಸಿ, ಶೌರ್ಯ ಸ್ವಾಗತಿಸಿ, ಆದಿತ್ಯ ವಂದನೆ ಗೈದು ಕಾರ್ಯಕ್ರಮ ವನ್ನು ಸಮಾಪ್ತಿ ಗೊಳಿಸಲಾಯಿತು ನಂತರ ವಿದ್ಯಾರ್ಥಿಗಳಿ0ದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು




