Home News ಫೆ.6-7 : ಒಡಿಯೂರು ಶ್ರೀ ಗುರುದೇವ ಆಧ್ಯಾತ್ಮ ಕೆಂದ್ರ ಲೋಕಾರ್ಪಣೆ-ತುಳು ಸಾಹಿತ್ಯ ಸಮ್ಮೇಳನ, ಒಡಿಯೂರು ರಥೋತ್ಸವ-ತುಳುನಾಡ...

ಫೆ.6-7 : ಒಡಿಯೂರು ಶ್ರೀ ಗುರುದೇವ ಆಧ್ಯಾತ್ಮ ಕೆಂದ್ರ ಲೋಕಾರ್ಪಣೆ-ತುಳು ಸಾಹಿತ್ಯ ಸಮ್ಮೇಳನ, ಒಡಿಯೂರು ರಥೋತ್ಸವ-ತುಳುನಾಡ ಜಾತ್ರೆ

Hindu neighbor gifts plot of land

Hindu neighbour gifts land to Muslim journalist

 

ಬಂಟ್ವಾಳ : ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಶ್ರೀ ಒಡಿಯೂರು ರಥೋತ್ಸವ ತುಳುನಾಡ ಜಾತ್ರೆ ಅಂಗವಾಗಿ ಶ್ರೀ ಗುರುದೇವ ಅಧ್ಯಾತ್ಮ ಕೇಂದ್ರ ಲೋಕಾರ್ಪಣೆ, ತುಳು ಸಾಹಿತ್ಯ ಸಮ್ಮೇಳನ ಫೆ.6,7 ರಂದು ನಡೆಯಲಿದೆ.

 

ಫೆ.6ರಂದು ಬೆಳಗ್ಗೆ 10ಕ್ಕೆ ಶ್ರೀ ಗುರುದೇವ ಅಧ್ಯಾತ್ಮ ಕೇಂದ್ರ ಲೋಕಾರ್ಪಣೆ ನಡೆಯಲಿದ್ದು, ದೀಪೋಜ್ವಲನವನ್ನು ಶ್ರೀ ಗುರುದೇವಾನಂದ ಸ್ವಾಮೀಜಿ ನಡೆಸಲಿದ್ದಾರೆ. ಸಾಧ್ವಿ ಮಾತಾನಂದಮಯೀ ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ.

ಮಧ್ಯಾಹ್ನ 2 ಗಂಟೆಗೆ ತುಳು ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಪ.ಪೂ. ಶ್ರೀ ಗುರುದೇವಾನಂದ ಸ್ವಾಮೀಜಿ ಉದ್ಘಾಟಿಸಿ,ಆಶೀರ್ವಚನ ನೀಡುವರು.ಅಧ್ಯಕ್ಷತೆಯನ್ನು ಸಾಹಿತಿ ಭಾಸ್ಕರ ರೈ ಕುಕ್ಕುವಳ್ಳಿ ವಹಿಸುವರು.ಅತಿಥಿಗಳಾಗಿ ಅಖಿಲ ಭಾರತ ತುಳು ಒಕ್ಕೂಟದ ಅಧ್ಯಕ್ಷ ಎ.ಸಿ.ಭಂಡಾರಿ,ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ ಮಲಾರುಬೀಡು,ತುಳುನಾಡ ರಕ್ಷಣಾ ವೇದಿಕೆಯ ಕೇಂದ್ರ ಮಂಡಳಿ ಅಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು ಉಪಸ್ಥಿತರಿರುವರು.ಉಡುಪಿ ಎಂ.ಜಿ.ಎಂ.ಕಾಲೇಜಿನ ಪ್ರಾದೇಶಿಕ ಸಂಶೋಧನಾ ಕೇಂದ್ರದ ಸಂಶೋಧಕ ಡಾ.ಎಸ್.ಆರ್.ಅರುಣ್ ಕುಮಾರ್ ಅವರು ತುಳುನಾಡಿನ ಸಂತ ಪರಂಪರೆ,ಗುರುವಾಯನಕೆರೆ ಎಕ್ಸೆಲ್ ಪ.ಪೂ.ಕಾಲೇಜಿನ ಪ್ರಾಚಾರ್ಯ ಡಾ.ನವೀನ್ ಮರಿಕೆ ತುಳುನಾಡಿನ ಜಾನಪದ ಪರಂಪರೆ, ಮಲ್ಲಿಕಾ ಜೆ. ರೈ ಗುಂಡ್ಕಡ್ಕ ಅವರು ತುಳುನಾಡಿನ ಸಾಹಿತ್ಯ ಪರಂಪರೆಯ ಬಗ್ಗೆ ಮಾತನಾಡುವರು.

 

ಈ ಸಂದರ್ಭದಲ್ಲಿ ಪಾಡ್ದನ ಕಲಾವಿದೆ ಕರ್ಗಿ ಶೆಡ್ತಿ ಅಳದಂಗಡಿ,ತುಳು/ಕನ್ನಡ ಸಿನೆಮಾ ನಿರ್ಮಾಪಕ ಪುಷ್ಪರಾಜ ರೈ ಮಲಾರುಬೀಡು,ಸಮಾಜ ಸೇವಕ ಹರೀಶ್ ಶೆಟ್ಟಿ ಮಾಡ,ಸಾವಯವ ಕೃಷಿಕ ಕೃಷ್ಣಪ್ಪ ಪುರುಷ ಕೇಪು,ಪೊಲೀಸ್ ಇಲಾಖೆಯ ಪ್ರವೀಣ್ ರೈ ನಡುಕೂಟೇಲು ಅವರಿಗೆ ಅವರಿಗೆ ತುಳುಸಿರಿ ಗೌರವಾರ್ಪಣೆ ನಡೆಯಲಿದೆ.

 

ಸಂಜೆ ಪಾವಂಜೆ ಮೇಳದಿಂದ ಯಕ್ಷಗಾನ ಬಯಲಾಟ ನಡೆಯಲಿದೆ.

 

ಫೆ.7ರಂದು ಬೆಳಗ್ಗೆ 9.00ಕ್ಕ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಆರಂಭ,10.30ಕ್ಕೆ ಶ್ರೀ ಸತ್ಯನಾರಾಯಣ ಪೂಜೆಯ ಮಹಾಮಂಗಳಾರತಿ

ಬೆಳಗ್ಗೆ 11ರಿಂದ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಧರ್ಮಸಭೆ ನಡೆಯಲಿದೆ. ಮಧ್ಯಾಹ್ನ ಪ್ರಸಾದ ವಿತರಣೆ, ಸಂತರ್ಪಣೆ ನಡೆಯಲಿದೆ.

 

ಅಪರಾಹ್ನ ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ವಿದ್ಯಾರ್ಥಿಗಳಿಂದ ತಾಲೀಮು ಪ್ರದರ್ಶನ ಹಾಗೂ ಸಾಂಸ್ಕೃತಿಕ ವೈವಿಧ್ಯ, ಶ್ರೀದೇವಿ ನೃತ್ಯಾರಾಧನಾ ಕಲಾಕೇಂದ್ರ (ರಿ.) ಪುತ್ತೂರು ಇದರ ನೃತ್ಯಗುರು ವಿದುಷಿ ಶ್ರೀಮತಿ ರೋಹಿಣಿ ಉದಯ್ ಇವರ ಶಿಷ್ಠೆಯರಿಂದ ‘ನೃತ್ಯ ರಂಜಿನಿ’ ನಡೆಯಲಿದೆ.

 

ಸಂಜೆ 7ರಿಂದ ಶ್ರೀ ದತ್ತಾಂಜನೇಯ ದೇವರ ವೈಭವೋಪೇತ ರಥಯಾತ್ರೆ ಶ್ರೀ ಸಂಸ್ಥಾನದಿಂದ ಗ್ರಾಮ ದೈವಸ್ಥಾನ (ಮಿತ್ತನಡ್ಕ)ಕ್ಕೆ ಹೋಗಿ, ಕನ್ಯಾನ ಪೇಟೆಸವಾರಿ, ನಂತರ ಸದ್ಗುರು ಶ್ರೀ ನಿತ್ಯಾನಂದ ಮಂದಿರದಲ್ಲಿ ವಿಶೇಷ ಪೂಜೆಯ ಬಳಿಕ ಶ್ರೀ ಸಂಸ್ಥಾನಕ್ಕೆ ರಥವು ಹಿಂತಿರುಗಲಿದೆ‌

 

ಶ್ರೀ ಉಳ್ಳಾಲ್ತಿ ಪಂಚಲಿಂಗೇಶ್ವರ ಭಜನಾ ಪರಿಷತ್ ವಿಟ್ಲ ಹಾಗೂ ವಿವಿಧ ಭಜನ ಮಂಡಳಿಗಳಿಂದ ಕುಣಿತ ಭಜನೆ

,ಸಂಜೆ ಪಾವಂಜೆ ಮೇಳದವರಿಂದ ‘ಶ್ರೀ ದೇವಿ ಮಹಾತ್ಮೆ’ ಯಕ್ಷಗಾನ ಬಯಲಾಟ, ಮಿತ್ತನಡ್ಕ ಶ್ರೀ ಮಲರಾಯಿ ದೈವಸ್ಥಾನದ ಬಳಿ ಶ್ರೀ ಟಿ.ಕೆ. ಭಟ್ ಮತ್ತು ಬಳಗದವರಿಂದ ‘ಸ್ವರಾಭಿಷೇಕ’, ಕಮ್ಮಾಜೆಯಲ್ಲಿ ಅಮ್ಮಾ ಗ್ರೂಪ್ಸ್‌ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಒಡಿಯೂರು ಶ್ರೀ ಸಂಸ್ಥಾನದ ಪ್ರಕಟಣೆ ತಿಳಿಸಿದೆ.