ಮಂಗಳವಾರ, 27 ಅಕ್ಟೋಬರ್ 2026
Trending

ಯೋಗ ಗುರು ಬಾಬಾ ರಾಮ್‌ದೇವ್‌ ವಿರುದ್ಧ ಎಫ್‌ಐಆರ್‌ ದಾಖಲು ! ಕಾರಣ ಇಲ್ಲಿದೆ

ನವದೆಹಲಿ: ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ದಾರ್ಶನಿಕರ ಸಭೆಯೊಂದರಲ್ಲಿ ಪ್ರಚೋದನಕಾರಿ ಹೇಳಿಕೆಗಳ ಮೇಲೆ ದ್ವೇಷವನ್ನು ಉತ್ತೇಜಿಸಿದ ಮತ್ತು ಧಾರ್ಮಿಕ ಭಾವನೆಗಳನ್ನು ಕೆರಳಿಸಿದ ಆರೋಪದ ಮೇಲೆ ಬಾಬಾ ರಾಮ್‌ದೇವ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಫೆಬ್ರವರಿ 2 ರಂದು ನಡೆದ ದಾರ್ಶನಿಕರ ಸಭೆಯಲ್ಲಿ, ಹಿಂದೂ ಧರ್ಮವನ್ನು ಇಸ್ಲಾಂ ಮತ್ತು ಕ್ರಿಶ್ಚಿಯನ್ ಧರ್ಮಕ್ಕೆ ಹೋಲಿಸುವಾಗ ಮುಸ್ಲಿಮರು ಭಯೋತ್ಪಾದನೆ ಮತ್ತು ಹಿಂದೂ ಮಹಿಳೆಯರನ್ನು ಅಪಹರಿಸುತ್ತಿದ್ದಾರೆ ಎಂದು ರಾಮದೇವ್ ಆರೋಪಿಸಿದ್ದಾಗಿ ವರದಿಯಾಗಿದೆ.

Sponsored

ಈ ಕಾರಣಕ್ಕಾಗಿ ಯೋಗ ಗುರು ರಾಮ್‌ದೇವ್ ವಿರುದ್ಧ ಭಾನುವಾರದಂದು (ಫೆಬ್ರವರಿ 5) ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement
Advertisement

ಸ್ಥಳೀಯ ನಿವಾಸಿ ಪಥಾಯಿ ಖಾನ್ ನೀಡಿದ ದೂರಿನ ಆಧಾರದ ಮೇಲೆ ಚೌಹಾಟನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಚೌಹಾತನ್ ಪೊಲೀಸ್ ಠಾಣೆ ಎಸ್‌ಎಚ್‌ಒ ಭೂತಾರಾಮ್ ಪ್ರಕಾರ, ಐಪಿಸಿ ಸೆಕ್ಷನ್ 153 ಎ, 295 ಎ, 298 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Advertisement