# Bengaluru: ಅಕ್ರಮ ಬಾಂಗ್ಲಾ ವಲಸಿಗರು ನೆಲೆಸಿದ್ದ ಶೆಡ್ ಗಳಿಗೆ ಬೆಂಕಿ – 100 ಶೆಡ್ ಗಳು ಸುಟ್ಟು ಭಸ್ಮ!!

- Link: https://hosakannada.com/news/fire-breaks-out-in-sheds-where-illegal-bangladeshi-immigrants-were-staying-100-sheds-burnt-to-ashes/
- Published: 2026-02-06T21:20:03+00:00
- Author: ಹೊಸಕನ್ನಡ ನ್ಯೂಸ್

Bengaluru : ಬೆಂಗಳೂರಿನ ಕೂಡ್ಲು ಕೆರೆ ಸಮೀಪ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶ ಮೂಲದ ವಲಸಿಗರ
ಶೆಡ್‌ಗಳಲ್ಲಿ ಬೆಂಕಿ ಕಾಣಿಸಿಕೊಂಡು 100ಕ್ಕೂ ಹೆಚ್ಚು ಶೆಡ್‌ಗಳು ಹೊತ್ತಿ ಉರಿದಿವೆ.

Sponsored

ಹೌದು, ಬೆಂಗಳೂರಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಶೆಡ್‌ಗೆ ಬೆಂಕಿ ಬಿದ್ದು 100ಕ್ಕೂ
ಅಧಿಕ ಶೆಡ್‌ಗಳು ಹೊತ್ತಿ ಉರಿದ ಘಟನೆ ಕೂಡ್ಲು ಕೆರೆ ಸಮೀಪ ನಡೆದಿದೆ. ಇಂದು ಬೆಳಗ್ಗೆ 5:30 ಸಮಯದಲ್ಲಿ
ಬೆಂಕಿ ಕಾಣಿಸಿಕೊಂಡಿದೆ. ಎಲೆಕ್ಟ್ರಾನಿಕ್ ಸಿಟಿ , ಹುಳಿಮಾವು , ಸರ್ಜಾಪುರ ಹಾಗು ಡೈರಿ ಸರ್ಕಲ್‌ನಿಂದ
ಬಂದ ಅಗ್ನಿಶಾಮಕದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.

Advertisement

Advertisement

ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ಶೆಡ್‌ಗಳು ಹಾಗೂ ಅಲ್ಲಿದ್ದ
ಸ್ಕ್ರಾಪ್ ವಸ್ತುಗಳು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿವೆ. ಹೈಟೆನ್ಷನ್ ವಿದ್ಯುತ್ ತಂತಿ ತುಂಡಾಗಿ
ಬಿದ್ದು ಬೆಂಕಿ ಹೊತ್ತಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್
ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Advertisement
