ಬಾಲಿವುಡ್ ನಟ ಟೈಗರ್ ಶ್ರಾಫ್ ಮೇಲೆ ಫೈರಿಂಗ್, ಕೈಗೆ ಗಾಯ? ವಿಡಿಯೋ ವೈರಲ್
ಮುಂಬೈನ ಜುಹೂ ಪ್ರದೇಶದಲ್ಲಿ ಟೈಗರ್ ಶ್ರಾಫ್ ಮೇಲೆ ಫೈರಿಂಗ್ ನಡೆದಿದ್ದು, ಈ ಘಟನೆ ನಂತರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಫುಟ್‌ಬಾಲ್ ಆಡಿ ಮರಳುತ್ತಿದ್ದ ವೇಳೆ ದುಷ್ಕರ್ಮಿಗಳು ಕಾರಿನ ಮೇಲೆ ಗುಂಡು ಹಾರಿಸಿದ್ದರು.
Sponsoredವಿಡಿಯೋದಲ್ಲಿ ಟೈಗರ್ ಶ್ರಾಫ್ ಹಸಿರು ಬಣ್ಣದ ಟಿ ಶರ್ಟ್ ಧರಿಸಿದ್ದು, ಅವರ ಬಲಗೈಗೆ ಬ್ಯಾಂಡೇಜ್ ಹಾಕಲಾಗಿದೆ. ಮುಖವನ್ನು ಕ್ಯಾಮೆರಾಗಳ ಕಣ್ಣಿಗೆ ಸಿಗದಂತೆ ಮರೆಮಾಸುವ ಪ್ರಯತ್ನ ಪಟ್ಟಿದ್ದಾರೆ.
ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಈ ಘಟನೆಯ ಹೊಣೆಯನ್ನು ಹೊತ್ತುಕೊಂಡಿದ್ದು, ಸಲ್ಮಾನ್ ಖಾನ್ ಜೊತೆ ಕೆಲಸ ಮಾಡುವವರು ಮೇಲೆ ದಾಳಿ ಮಾಡಲಾಗುತ್ತದೆ ಎನ್ನಲಾಗಿದೆ.

ಬಾಲಿವುಡ್ ನಟ ಟೈಗರ್ ಶ್ರಾಫ್ ನಿವಾಸಕ್ಕೆ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಭೇಟಿ ನೀಡಿ, ನಡೆದ ಘಟನೆಯ ಕುರಿತು ಗಂಭೀರ ಆತಂಕ ವ್ಯಕ್ತಪಡಿಸಿದ್ದಾರೆ. ಈ ಘಟನೆಯಲ್ಲಿ ಟೈಗರ್ ಶ್ರಾಫ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬುಲೆಟ್ ಹಾಗೂ ಗಾಜಿನ ತುಣುಕುಗಳು ತಗುಲಿ ಟೈಗರ್ ಶ್ರಾಫ್ ಅವರ ಕಾರು ಚಾಲಕರ ಎಡಗೈಗೆ ಗಾಯವಾಗಿದೆ. ಈ ಘಟನೆಯ ನಂತರ ನಟ ಟೈಗರ್ ಶ್ರಾಫ್ ಮತ್ತು ಅವರ ತಾಯಿ ತೀವ್ರ ಆಘಾತಕ್ಕೊಳಗಾಗಿದ್ದಾರೆ ಎಂದು ಅವರು ಹೇಳಿದರು.




