Home News ಫೆ.10ರಿಂದ ಪ್ರಥಮ ಪಿಯು ವಾರ್ಷಿಕ ಪರೀಕ್ಷೆ

ಫೆ.10ರಿಂದ ಪ್ರಥಮ ಪಿಯು ವಾರ್ಷಿಕ ಪರೀಕ್ಷೆ

2nd PUC Exam
Image Credit: The Indian Express

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರು: 2025-26ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಫೆ.10 ರಿಂದ 25ರವರೆಗೆ ನಡೆಸುವಂತೆ ಪದವಿಪೂರ್ವ ಶಿಕ್ಷಣ ಇಲಾಖೆಯು ಎಲ್ಲ ಪದವಿಪೂರ್ವ ಕಾಲೇಜುಗಳಿಗೆ ಸೂಚನೆ ನೀಡಿದೆ. ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳಿಂದ ಹಣ ಸಂಗ್ರಹಿಸದೆ ಪರೀಕ್ಷೆ ನಡೆಸುವಂತೆಯೂ ಸೂಚಿಸಲಾಗಿದೆ.

ಇಲಾಖೆ ಹೊರಡಿಸಿರುವ ದಾಖಲಾತಿ ಮಾರ್ಗಸೂಚಿ ಅನ್ವಯ ಪರೀಕ್ಷೆಗಳನ್ನು ನಡೆಸುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕ ಭರತ್ ಎಸ್. ಸುತ್ತೋಲೆ ಹೊರಡಿಸಿದ್ದಾರೆ.

ಕರ್ನಾಟಕ ಶಾಲಾ ಪರೀಕ್ಷೆಮತ್ತು ಮೌಲ್ಯ ನಿರ್ಣಯ ಮಂಡಳಿಯು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿರುವ ದ್ವಿತೀಯ ಪಿಯುಸಿ ಪ್ರಶ್ನೆಪತ್ರಿಕೆ ಮಾದರಿಗಳನ್ನು ಅನುಸರಿಸಿ ಪ್ರಶ್ನೆಪತ್ರಿಕೆಗಳನ್ನು ಸಿದ್ದಪಡಿಸಿ ಯಾವುದೇ ನ್ಯೂನತೆಗಳಿಲ್ಲದೆ, ದೂರುಗಳಿಗೆ ಆಸ್ಪದ ಕೊಡದೇ ಪರೀಕ್ಷೆ ನಡೆಸುವಂತೆ ನೂನತೆಗಳಿಲದೆ ಸಲಹೆ ನೀಡಲಾಗಿದೆ. ಫೆ.25ರೊಳಗಾಗಿ ಎಲ್ಲಾ ಪರೀಕ್ಷಾ ಕಾರ್ಯಗಳನ್ನು ಮುಗಿಸಿ ಮೌಲ್ಯಮಾಪನದ ಬಳಿಕ ಅಂಕಗಳನ್ನು ಎಸ್‌ಎಟಿಎಸ್‌ ತಂತ್ರಾಂಶದಲ್ಲಿ ಕ್ರೋಡೀಕರಿಸಿ ಪಟ್ಟಿಯನ್ನು ಡೌನ್ ಲೋಡ್ ಮಾಡಿಕೊಳ್ಳಬೇಕು. ಮಾ.13ರೊಳಗೆ ಸಂಬಂಧಪಟ್ಟ ಜಿಲ್ಲಾ ಉಪನಿರ್ದೇಶಕರಿಂದ ಫಲಿತಾಂಶ ಪಟ್ಟಿಗೆ ಅನುಮೋದನೆ ಪಡೆದು ಮಾ.30 ರಂದು ಫಲಿತಾಂಶ ಪ್ರಕಟಿಸುವಂತೆ ನಿರ್ದೇಶನ ನೀಡಲಾಗಿದೆ.