Home News Fishing: ಕೇಣಿಯಲ್ಲಿ ಖಾಸಗಿ ಬಂದರು ನಿರ್ಮಾಣಕ್ಕೆ ಮೀನುಗಾರರ ವಿರೋಧ : ಮಾ.15ರ ವರೆಗೆ ನಿಷೇಧಾಜ್ಞೆ ಮುಂದುವರಿಕೆ

Fishing: ಕೇಣಿಯಲ್ಲಿ ಖಾಸಗಿ ಬಂದರು ನಿರ್ಮಾಣಕ್ಕೆ ಮೀನುಗಾರರ ವಿರೋಧ : ಮಾ.15ರ ವರೆಗೆ ನಿಷೇಧಾಜ್ಞೆ ಮುಂದುವರಿಕೆ

Hindu neighbor gifts plot of land

Hindu neighbour gifts land to Muslim journalist

Fishing: ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಕೇಣಿಯಲ್ಲಿ ಖಾಸಗಿ ಬಂದರು ನಿರ್ಮಾಣಕ್ಕೆ ಮೀನುಗಾರರು ನಿರಂತರ ವಿರೋಧ ವ್ಯಕ್ತಪಡಿಸುತ್ತಿರುವ ಹಿನ್ನೆಲ್ಲೆಯಲ್ಲಿ ಅಂಕೋಲದ ಭಾವಿಕೇರಿ ಪಂಚಾಯ್ತಿ ವ್ಯಾಪ್ತಿ ಹಾಗೂ ಕೇಣಿಯಲ್ಲಿ ನಿಷೇಧಾಜ್ಞೆಯನ್ನು ಮಾ.15ರ ವರೆಗೂ ಮುಂದುವರಿಸಿ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಅವರು ಆದೇಶಿಸಿದ್ದಾರೆ.

ಇದರ ಬೆನ್ನಲ್ಲೇ ಮೀನುಗಾರರು (Fishing) ಸಮುದ್ರದಲ್ಲಿ ತಮ್ಮ ಬೋಟ್‌ಗಳೊಂದಿಗೆ ಪ್ರತಿಭಟನೆ ಮಾಡಲು ತೀರ್ಮಾನಿಸಿದ್ದು, ಸಮುದ್ರದಲ್ಲೇ ಬೃಹತ್ ಪ್ರತಿಭಟನೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅಂಕೋಲದ ಕೇಣಿಯ ಕಡಲ ತೀರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದ್ದು, ಸಮುದ್ರದ 500 ಮೀಟರ್ ಹೊರಗಿನ ಸಮುದ್ರದಲ್ಲೂ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.