Hassan: ಆಹಾರ ಸಚಿವ ಮುನಿಯಪ್ಪ ಪ್ರಯಾಣ ಮಾಡುತ್ತಿದ್ದ ಕಾರು ಅಪಘಾತ
Hassan: ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ ಪ್ರಯಾಣ ಮಾಡುತ್ತಿದ್ದ ಕಾರು ಅಪಘಾತವಾಗಿದೆ. ಹಿಂಬದಿಯಿಂದ ಬರುತ್ತಿದ್ದ ಇನೋವಾ ಸಚಿವರ ಕಾರಿಗೆ ಡಿಕ್ಕಿ ಹೊಡೆದಿದೆ.
Hassan: ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ ಪ್ರಯಾಣ ಮಾಡುತ್ತಿದ್ದ ಕಾರು ಅಪಘಾತವಾಗಿದೆ. ಹಿಂಬದಿಯಿಂದ ಬರುತ್ತಿದ್ದ ಇನೋವಾ ಸಚಿವರ ಕಾರಿಗೆ ಡಿಕ್ಕಿ ಹೊಡೆದಿದೆ.
Sponsoredಈ ಅಪಘಾತದಲ್ಲಿ ಸಚಿವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮುನಿಯಪ್ಪ ಅವರು ಹಾಸನದಲ್ಲಿ ಜನಕಲ್ಯಾಣ ಸಮಾವೇಶಕ್ಕೆ ಪ್ರಯಾಣ ಮಾಡುತ್ತಿದ್ದಾಗ, ರಾಷ್ಟ್ರೀಯ ಹೆದ್ದಾರಿ 75 ಶಾಂತ್ರಿಗ್ರಾಮದ ಟೋಲ್ ಬಳಿ ಈ ಘಟನೆ ನಡೆದಿದೆ.
ಸಚಿವರ ಕಾರು ಈ ಅಪಘಾತದಿಂದ ಜಖಂಗೊಂಡಿದೆ. ನಂತರ ಸಚಿವರು ಬದಲಿ ವಾಹನದ ಮೂಲಕ ಸಮಾವೇಶಕ್ಕೆ ಬಂದಿದ್ದಾರೆ.




