Home News Doctor: ಸರ್ಕಾರಿ ಆಸ್ಪತ್ರೆಗಳ ವೈದ್ಯರಿಗೆ ಬೆ. 9 ರಿಂದ 4 ಗಂಟೆವರೆಗೆ ಕರ್ತವ್ಯ ಕಡ್ಡಾಯ; ಬಯೋಮೆಟ್ರಿಕ್...

Doctor: ಸರ್ಕಾರಿ ಆಸ್ಪತ್ರೆಗಳ ವೈದ್ಯರಿಗೆ ಬೆ. 9 ರಿಂದ 4 ಗಂಟೆವರೆಗೆ ಕರ್ತವ್ಯ ಕಡ್ಡಾಯ; ಬಯೋಮೆಟ್ರಿಕ್ ಮಾಡಿದರಷ್ಟೇ ವೈದ್ಯರಿಗೆ ಸಂಬಳ!

Hindu neighbor gifts plot of land

Hindu neighbour gifts land to Muslim journalist

Doctor: ಇನ್ನು ಮುಂದೆ ಸರ್ಕಾರಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯರು (Doctor) ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಕಡ್ಡಾಯವಾಗಿ ಕಾರ್ಯ ನಿರ್ವಹಿಸಲಿದ್ದು, ಈಗಾಗಲೇ ಎಲ್ಲಾ ಸರ್ಕಾರಿ ಆಸ್ಪತ್ರೆಗಳ ಮುಖ್ಯಸ್ಥರಿಗೆ ಅಧಿಸೂಚನೆ ಮೂಲಕ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಸೂಚಿಸಲಾಗಿದೆ. ಒಂದು ವೇಳೆ ಯಾರಾದರೂ ಉಲ್ಲಂಘನೆ ಮಾಡಿರುವುದು ಕಂಡುಬಂದರೆ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರನ್ ಪ್ರಕಾಶ್ ಪಾಟೀಲ್ (Dr.Sharan Prakash Patil ) ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ತಿಳಿಸಿದರು.

ಅಲ್ಲದೇ ಇನ್ನುಮುಂದೆ ವೈದ್ಯರು ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾದ ವೇಳೆ ನಾಲ್ಕು ಬಾರಿ ಬಯೋಮೆಟ್ರಿಕ್‍ಗೆ ತಮ್ಮ ಹಸ್ತಮುದ್ರೆ ಹಾಕಬೇಕು. ಇದರ ಆಧಾರಿತವಾಗಿಯೇ ಸಂಬಳವನ್ನು ನೀಡಲಾಗುವುದು. ಈ ಕುರಿತು ಮುಖ್ಯಸ್ಥರ ಜೊತೆಯೂ ಚರ್ಚೆ ಮಾಡಲಾಗಿದೆ. ರೋಗಿಗಳಿಗೆ ಸಕಾಲಕ್ಕೆ ಸರಿಯಾಗಿ ಚಿಕಿತ್ಸೆ ನೀಡುವುದು ಸರ್ಕಾರದ ಮೊದಲ ಆದ್ಯತೆ ಎಂದು ಸಚಿವರು ಹೇಳಿದರು.