ಶನಿವಾರ, 24 ಅಕ್ಟೋಬರ್ 2026

ಹವಾಮಾನ ಇಲಾಖೆಯಿಂದ ಮುನ್ಸೂಚನೆ; ಈ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ

ರಾಜ್ಯದ ಕರಾವಳಿ, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತುಮಿಳುನಾಡಿನಲ್ಲಿ ಮೇಲ್ಮೈ ಸುಳಿಗಾಳಿ ಬೀಸುತ್ತಿರುವುದರಿಂದ ಕರ್ನಾಟಕದ ಕರಾವಳಿ, ಉತ್ತರ ಕರ್ನಾಟಕ, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಕರ್ನಾಟಕ ಕರಾವಳಿ, ಕೊಡಗು, ಹಾಸನ, ಚಿಕ್ಕಮಗಳೂರು, ಮಂಡ್ಯ, ದಾವಣಗೆರೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ