Home News RSS ನ ವಿಜಯದಶಮಿಗೆ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮುಖ್ಯ ಅತಿಥಿ !!

RSS ನ ವಿಜಯದಶಮಿಗೆ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮುಖ್ಯ ಅತಿಥಿ !!

Hindu neighbor gifts plot of land

Hindu neighbour gifts land to Muslim journalist

RSS: ಅಕ್ಟೋಬರ್ 2 ರಂದು ನಡೆಯಲಿರುವ ಆರ್ ಎಸ್ ಎಸ್ ವಿಜಯದಶಮಿ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಭಾರತದ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪಾಲ್ಗೊಳ್ಳಲಿದ್ದಾರೆ.

ಹೌದು, ರಾಷ್ಟ್ರೀಯ ಸ್ವಯಂಸೇವಕ ಸಂಘ(RSS), ಅಕ್ಟೋಬರ್ 2 ರಂದು ವಿಜಯದಶಮಿಯಿಂದ ಪ್ರಾರಂಭವಾಗುವ ಕಾರ್ಯಕ್ರಮಗಳೊಂದಿಗೆ ತನ್ನ ಶತಮಾನೋತ್ಸವ ವರ್ಷವನ್ನು ಆಚರಿಸಲಿದೆ. ಈ ಈ ವಿಜಯದಶಮಿ ಕಾರ್ಯಕ್ರಮದಲ್ಲಿ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸುತ್ತಿದ್ದಾರೆ.

ಈ ಕುರಿತಾಗಿ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಚಾರ ಪ್ರಮುಖ್ ಸುನಿಲ್ ಅಂಬೇಕರ್ ಸೋಮವಾರ ನಾಗ್ಪುರದ ಪತ್ರಿಕಾಗೋಷ್ಠಿಯಲ್ಲಿ “ಅಕ್ಟೋಬರ್ 2 ರಂದು, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ವಿಜಯದಶಮಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸುತ್ತಾರೆ ಮತ್ತು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಪ್ರಪಂಚದಾದ್ಯಂತ ಸ್ವಯಂಸೇವಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಜಾಜ್ ಫಿನ್‌ಸರ್ವ್ ಅಧ್ಯಕ್ಷ ಸಂಜೀವ್ ಬಜಾಜ್, ಡೆಕ್ಕನ್ ಇಂಡಸ್ಟ್ರೀಸ್‌ನ ಕೆ.ವಿ. ಕಾರ್ತಿಕ್ ಮತ್ತು ಲೆಫ್ಟಿನೆಂಟ್ ಜನರಲ್ ರಾಣಾ ಪ್ರತಾಪ್ ಕಲಿತಾ ಅವರು ಈ ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:Karnataka Gvt: ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ – ಅ. 1ರಿಂದ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ಸರ್ಕಾರ ಆದೇಶ!!

ಅಲ್ಲದೆ ಈ ಕಾರ್ಯಕ್ರಮದಲ್ಲಿ ಘಾನಾ, ದಕ್ಷಿಣ ಆಫ್ರಿಕಾ, ಥೈಲ್ಯಾಂಡ್, ಇಂಡೋನೇಷ್ಯಾ, ಯುಕೆ ಮತ್ತು ಯುಎಸ್ಎಗಳಿಂದ ಅತಿಥಿಗಳು ಭಾಗವಹಿಸಲಿದ್ದು, ವಿದೇಶಿ ಮಾಧ್ಯಮಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿವೆ ಎಂದು ಅವರು ಹೇಳಿದ್ದಾರೆ.