Home News Dharmasthala: ಮಹಿಳೆಯರಿಗೆ ಉಚಿತ ಫ್ಯಾಶನ್ ಡಿಸೈನಿಂಗ್/ ಟೈಲರಿಂಗ್ ತರಬೇತಿ!

Dharmasthala: ಮಹಿಳೆಯರಿಗೆ ಉಚಿತ ಫ್ಯಾಶನ್ ಡಿಸೈನಿಂಗ್/ ಟೈಲರಿಂಗ್ ತರಬೇತಿ!

Hindu neighbor gifts plot of land

Hindu neighbour gifts land to Muslim journalist

Dharmasthala: ಶ್ರೀ ಧರ್ಮಸ್ಥಳ (Dharmasthala) ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಫ್ಯಾಶನ್ ಡಿಸೈನಿಂಗ್/ ಟೈಲರಿಂಗ್ ಕುರಿತ 30 ದಿನಗಳ ಉಚಿತ ತರಬೇತಿಯು ಏಪ್ರಿಲ್ 03 ರಿಂದ ಆರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಮಹಿಳೆಯರು ತರಬೇತಿಗೆ ಅರ್ಜಿ ಸಲ್ಲಿಸಬಹುದು.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್ ಕಡ್ಡಾಯ ಹೊಂದಿರಬೇಕು ಹಾಗೂ ನರೇಗಾ ಯೋಜನೆಯ ಜಾಬ್ ಕಾರ್ಡ್ ಅಥವಾ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರ ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಮಾರ್ಚ್ 20 ಕೊನೆಯ ದಿನವಾಗಿದೆ.

ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ರುಡ್‍ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9241482541, 9380162042, 9740982585, 9113880324 ನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‍ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ತಿಳಿಸಿದ್ದಾರೆ.