80ನೇ ಸ್ವಾತಂತ್ರ್ಯ ದಿನೋತ್ಸವದ ಪ್ರಯುಕ್ತ ಕೆಂಪುಕೋಟೆಯ ಮೇಲಿಂದ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಯುವಜನತೆಗೆ ಬೃಹತ್ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಪ್ರವೇಶ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧರಾಗಲು ಸರ್ಕಾರವೇ ಉಚಿತ ಆನ್ಲೈನ್ ಕೋಚಿಂಗ್ ಸೌಲಭ್ಯವನ್ನು ಒದಗಿಸಲಿದೆ ಎಂದು ಪ್ರಧಾನಿಯವರು ಘೋಷಿಸಿದ್ದಾರೆ.
Sponsoredಖಾಸಗಿ ಕೋಚಿಂಗ್ ಸೆಂಟರ್ಗಳು ಇಂದು ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳ ಮೇಲೆ ಬೃಹತ್ ಆರ್ಥಿಕ ಹೊರೆಯನ್ನು ಹೇರುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದ ಮೋದಿ, ತಮ್ಮ ಮಕ್ಕಳನ್ನು ಖಾಸಗಿ ಕೋಚಿಂಗ್ಗೆ ಸೇರಿಸದಿದ್ದರೆ ಅವರು ಹಿಂದುಳಿದು ಬಿಡುತ್ತಾರೆ ಅಥವಾ ಸಮಾಜದಲ್ಲಿ ಗೌರವ ಸಿಗುವುದಿಲ್ಲ ಎಂಬ ಭಾವನೆ ಪ್ರತಿಯೊಬ್ಬ ಪೋಷಕರಲ್ಲಿ ನಿರ್ಮಾಣವಾಗಿದೆ. ಈ ರೀತಿ ಕೋಚಿಂಗ್ಗಾಗಿ ದೇಶದ ಕುಟುಂಬಗಳು ವೆಚ್ಚ ಮಾಡುತ್ತಿರುವ ಸಾವಿರಾರು ಕೋಟಿ ರೂಪಾಯಿಗಳನ್ನು ಉಳಿಸುವುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ. ಯುವಜನರು ತಮ್ಮ ಕುಟುಂಬದಿಂದ ದೂರ ಉಳಿಯದೆ, ಆರ್ಥಿಕ ಸವಾಲುಗಳಿಗೆ ಸಿಲುಕದೆ ಪರೀಕ್ಷೆಗಳಿಗೆ ಸಿದ್ಧರಾಗಬೇಕು ಎಂದು ಅವರು ಆಶಿಸಿದರು.
ಅಲ್ಲದೆ ನಮ್ಮ ದೇಶದಲ್ಲಿ ಈಗಾಗಲೇ ಅತ್ಯಂತ ಬಲವಾದ ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ (Digital Public Infrastructure) ಲಭ್ಯವಿದೆ ಹಾಗೂ ಪ್ರಗತಿಪರ, ಪ್ರತಿಭಾವಂತ ಶಿಕ್ಷಕರು ನಮ್ಮೊಂದಿಗಿದ್ದಾರೆ. ಇವುಗಳನ್ನು ಬಳಸಿಕೊಂಡು ಪ್ರತಿಯೊಬ್ಬ ವಿದ್ಯಾರ್ಥಿಗೂ ಗುಣಮಟ್ಟದ ಶಿಕ್ಷಣ ಮತ್ತು ತರಬೇತಿಯನ್ನು ಉಚಿತವಾಗಿ ನೀಡಲಾಗುವುದು ಎಂದು ಪ್ರಧಾನಿ ಹೇಳಿದರು.




