Home News Nithin Ghadkari: ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ಇನ್ನು ಕೇಂದ್ರದಿಂದ ಫ್ರೀ ಟ್ರೀಟ್ಮೆಂಟ್‌ – ನಿತಿನ್‌ ಗಡ್ಕರಿ...

Nithin Ghadkari: ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ಇನ್ನು ಕೇಂದ್ರದಿಂದ ಫ್ರೀ ಟ್ರೀಟ್ಮೆಂಟ್‌ – ನಿತಿನ್‌ ಗಡ್ಕರಿ ಘೋಷಣೆ!!

Hindu neighbor gifts plot of land

Hindu neighbour gifts land to Muslim journalist

Nithin Ghadkari: ರಸ್ತೆ ಅಪಘಾತದಲ್ಲಿ ಗಾಯಗೊಂಡರೆ ಇನ್ನು ಮುಂದೆ ಕ್ಯಾಶ್‌ಲೆಸ್‌ ಟ್ರೀಟ್‌ಮೆಂಟ್‌ ನೀಡಲಾಗುವುದು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ(Nithin ghadkari) ಅವರು ಘೋಷಣೆ ಮಾಡಿದ್ದಾರೆ.

ಯಸ್, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಜನವರಿ 7 ರಂದು ರಸ್ತೆ ಅಪಘಾತ ಸಂತ್ರಸ್ತರಿಗೆ ನಗದು ರಹಿತ ಚಿಕಿತ್ಸೆ ನೀಡುವ ಹೊಸ ಯೋಜನೆಯನ್ನು ಘೋಷಿಸಿದರು. ಇದರ ಪ್ರಕಾರ ಅಪಘಾತ ಸಂಭವಿಸಿದ 24 ಗಂಟೆಗಳ ಒಳಗೆ ಪೊಲೀಸರಿಗೆ ಮಾಹಿತಿ ನೀಡಿದ ನಂತರ, ಯೋಜನೆಯು ತಕ್ಷಣವೇ ಸಂತ್ರಸ್ತರ 7 ದಿನಗಳ ಚಿಕಿತ್ಸೆಯ ವೆಚ್ಚವನ್ನು ಅಥವಾ ಗರಿಷ್ಠ 1.5 ಲಕ್ಷ ರೂಪಾಯಿ ವೆಚ್ಚವನ್ನು ಭರಿಸಲಿದೆ ಎಂದು ಅವರು ತಿಳಿಸಿದ್ದಾರೆ

ಅಂದಹಾಗೆ ಈ ಹಿಂದೆ ಆಯುಷ್ಮಾನ್‌ ಭಾರತ್‌ ಪ್ರಧಾನ ಮಂತ್ರಿ-ಜನಾರೋಗ್ಯ ಯೋಜನೆ’ಯಡಿ ರಸ್ತೆ ಅಪಘಾತಗಳಲ್ಲಿ ಗಾಯಗೊಂಡವರಿಗೆ ನಗದು ರಹಿತ ಚಿಕಿತ್ಸೆ ನೀಡಲು ಕೇಂದ್ರ ಸರಕಾರವು ಯೋಜನೆ ರೂಪಿಸಿತ್ತು. ಆರಂಭದಲ್ಲಿ ಚಂಡೀಗಢ ಮತ್ತು ಅಸ್ಸಾಂನಲ್ಲಿ ಇದನ್ನು ಪ್ರಾಯೋಗಿಕವಾಗಿ ಜಾರಿಗೊಳಿಸಲಾಗಿದ್ದು, ಅವಘಡ ಸಂಭವಿಸಿದ ದಿನದಿಂದ ಏಳು ದಿನಗಳವರೆಗೆ ಗರಿಷ್ಠ 1.5 ಲಕ್ಷ ರೂ.ವರೆಗಿನ ಚಿಕಿತ್ಸೆಯನ್ನು ಉಚಿತವಾಗಿ ಪಡೆಯಬಹುದಾಗಿತ್ತು. ಈ ಯೋಜನೆ ಯಶಸ್ವಿಯಾದ ಬಳಿಕ ಇದೀಗ ದೇಶಾದ್ಯಂತ ಜಾರಿಗೆ ತರಲು ಕೇಂದ್ರ ಮುಂದಾಗಿದೆ.

ಈ ಕುರಿತು ಮಾತನಾಡದ ಸಚಿವ ಗಡ್ಕರಿ ಅವರು ಹಿಟ್ ಅಂಡ್ ರನ್ ಪ್ರಕರಣದಲ್ಲಿ ಮೃತಪಟ್ಟರೆ ಮೃತ ವ್ಯಕ್ತಿಯ ಕುಟುಂಬಕ್ಕೆ 2 ಲಕ್ಷ ರೂಪಾಯಿ ಪರಿಹಾರ ಸಿಗಲಿದೆ ಎಂದಿದ್ದಾರೆ. ಅಲ್ಲದೆ ನಾವು ಈ ನಗದು ರಹಿತ ಯೋಜನೆಯನ್ನು ಕೆಲವು ರಾಜ್ಯಗಳಲ್ಲಿ ಪ್ರಾಯೋಗಿಕವಾಗಿ ನಡೆಸಿದ್ದೇವೆ. ನಾವು ಯೋಜನೆಯಲ್ಲಿ ಕೆಲವು ದೌರ್ಬಲ್ಯಗಳನ್ನು ಗಮನಿಸಿದ್ದೇವೆ. ನಾವು ಅವುಗಳನ್ನು ಸುಧಾರಿಸುತ್ತಿದ್ದೇವೆ ಮತ್ತು ಇದು ಖಂಡಿತವಾಗಿಯೂ ಪ್ರಯೋಜನಕಾರಿಯಾಗಿದೆ’ ಎಂದು ನವದೆಹಲಿಯ ಭಾರತ ಮಂಟಪದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.