Home News D K Shivkumar : ಇನ್ಮುಂದೆ ಮನೆ ಕಟ್ಟುವಾಗ ಬೇಸ್ಮೆಂಟ್ ಮಾಡುವಂತಿಲ್ಲ – ಸದ್ಯದಲ್ಲೇ ಹೊಸ...

D K Shivkumar : ಇನ್ಮುಂದೆ ಮನೆ ಕಟ್ಟುವಾಗ ಬೇಸ್ಮೆಂಟ್ ಮಾಡುವಂತಿಲ್ಲ – ಸದ್ಯದಲ್ಲೇ ಹೊಸ ಕಾನೂನು ಜಾರಿ

Hindu neighbor gifts plot of land

Hindu neighbour gifts land to Muslim journalist

D K Shivkumar : ಬೆಂಗಳೂರಿನಲ್ಲಿ ಭಾರಿ ಪ್ರಮಾಣದಲ್ಲಿ ಮಳೆ ಆದ ಕಾರಣ ಹಲವೆಡೆ ಅವಾಂತರ ಸೃಷ್ಟಿಯಾಗಿತ್ತು. ಅಲ್ಲದೇ ಬಿಟಿಎಂ ಲೇಔಟ್ ನಲ್ಲಿ , ಅಪಾರ್ಟ್ಮೆಂಟಿನ ಬೇಸ್ಮೆಂಟ್ ನಲ್ಲಿದ್ದ ನೀರನ್ನು ಮೋಟಾರ್ ಮೂಲಕ ಹೊರ ಹಾಕುವ ವೇಳೆ ಓರ್ವ ಬಾಲಕ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದೇ ಸಮಯದಲ್ಲಿ ಅವರು ಮನೆ ಕಟ್ಟುವ ಸಂದರ್ಭದಲ್ಲಿ ಬೇಸ್ಮೆಂಟ್ ಮಾಡುವ ಕುರಿತು ಹೊಸ ಕಾನೂನನ್ನು ತರುವ ಬಗ್ಗೆ ಮಾತನಾಡಿದ್ದಾರೆ.

ಹೌದು, ಮಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಬೆಂಗಳೂರಿನ ಹಲವಡೆ ಕೆರೆಯ ಅಕ್ಕಪಕ್ಕದಲ್ಲಿ ಮನೆ ಕಟ್ಟಿದ್ದಾರೆ. ಕೆರೆಯ ಅಕ್ಕ ಪಕ್ಕದಲ್ಲಿ ಮನೆ ನಿರ್ಮಿಸಿರುವುದರಿಂದ ಸಮಸ್ಯೆಯಾಗುತ್ತಿದೆ. ಮುಂದೆ ಇಂತಹ ಘಟನೆಗಳು ಆಗದಂತೆ ಮನೆ ಕಟ್ಟಬೇಕಾದರೆ ಬೇಸ್ಮೆಂಟ್ ಮಾಡಲು ಹೊಸ ನಿಯಮ ತರುತ್ತೇವೆ ಎಂದು ಹೇಳಿದ್ದಾರೆ.

ಇನ್ಮುಂದೆ ಮನೆ ಕಟ್ಟಬೇಕಾದರೆ ಬೇಸ್​ಮೆಂಟ್ (basement) ಮಾಡಬಾರದು. ಬೇಸ್​ಮೆಂಟ್​ನಿಂದ ಸಾಕಷ್ಟು ಅನಾಹುತವಾಗುತ್ತಿದೆ. ಇನ್ಮುಂದೆ ಗ್ರೌಂಡ್​ಫ್ಲೋರ್​ನಲ್ಲೇ ಪಾರ್ಕಿಂಗ್ ಇರಬೇಕು. ಬೇಸ್​ಮೆಂಟ್​ನಲ್ಲಿ ಪಾರ್ಕಿಂಗ್ ಮಾಡುವಂತಿಲ್ಲ. ಅಂಡರ್​ ಗ್ರೌಂಡ್​ ಹೊರತುಪಡಿಸಿ ನೆಲ ಮಹಡಿಯಲ್ಲಿ ವಾಹನಗಳನ್ನು ನಿಲ್ಲಿಸುವ ರೀತಿ ಯೋಜನೆ ರೂಪಿಸುವ ಆಲೋಚನೆ ಇದೆ. ಅದರ ಮೇಲೆ ಜನರು ವಾಸಕ್ಕೆ ಮನೆ ನಿರ್ಮಾಣ ಮಾಡಿಕೊಳ್ಳಲಿ. ಮಳೆ ಕಡಿಮೆಯಾದ ನಂತರ ಇದರ ಬಗ್ಗೆ ಕಾರ್ಯಸೂಚಿ ಬಿಡುಗಡೆ ಮಾಡಲಾಗುವುದು ಎಂದರು.