Home News Ramalinga Reddy: ಇನ್ಮುಂದೆ ರಾಜ್ಯದಲ್ಲಿ ಪುರುಷರಿಗೂ ಉಚಿತ ಬಸ್ ಪ್ರಯಾಣ? ಬಿಗ್ ಅಪ್ಡೇಟ್ ನೀಡಿದ...

Ramalinga Reddy: ಇನ್ಮುಂದೆ ರಾಜ್ಯದಲ್ಲಿ ಪುರುಷರಿಗೂ ಉಚಿತ ಬಸ್ ಪ್ರಯಾಣ? ಬಿಗ್ ಅಪ್ಡೇಟ್ ನೀಡಿದ ಸಚಿವ ರಾಮಾಲಿಂಗ ರೆಡ್ಡಿ !!

Hindu neighbor gifts plot of land

Hindu neighbour gifts land to Muslim journalist

Ramalinga Reddy: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿಯ ಐದು ಯೋಜನೆಗಳ ಪೈಕಿ ಮೊದಲಿಗೆ ಜಾರಿಗೆ ಬಂದಿದ್ದು ಶಕ್ತಿ ಯೋಜನೆ. ಈ ಯೋಜನೆಯಡಿ ಮಹಿಳೆಯರು ರಾಜ್ಯದ ಸಾರಿಗೆ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಈ ಮಧ್ಯೆ ಪುರುಷರಿಗೂ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ನೀಡಬೇಕು ಎಂಬ ಮಾತುಗಳು ಮತ್ತೆ ಕೇಳಿ ಬರುತ್ತಿವೆ. ಡಿ ಸಿ ಎಂ ಡಿ ಕೆ ಶಿವಕುಮಾರ್ ಅವರು ಈ ಕುರಿತು ಸುಳಿವು ನೀಡಿದ್ದರೂ ಎಂಬ ಸುದ್ದಿ ಕೂಡ ಹರಿದಾಡಿತ್ತು. ಆದರೆ ಈಗ ಈ ಬೆನ್ನಲ್ಲೇ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ(Ramalinga Reddy)ಅವರು ಈ ಬಗ್ಗೆ ಸ್ಪಷ್ಟೀಕರಣ ನೀಡಿದ್ದಾರೆ.

ಹೌದು, ಹುಬ್ಬಳ್ಳಿಯಲ್ಲಿ(Hubballi) ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುರುಷರಿಗೂ ಕೂಡ ಉಚಿತ ಬಸ್ ವ್ಯವಸ್ಥೆಯನ್ನು ಕಲ್ಪಿಸುವಂತಹ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ. ಒಂದು ಸಂವಾದ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.‌ಶಿವಕುಮಾರ(D K Shivkumar )ಈ ವಿಷಯವನ್ನು‌ ಪ್ರಸ್ತಾಪಿಸಿದ್ದಾರೆ. ಅವರನ್ನು ಭೇಟಿ ಮಾಡಿದಾಗ ಈ ಕುರಿತು ಮಾತುಕತೆ ನಡೆಸುತ್ತೇನೆ ಎಂದಿದ್ದಾರೆ.

ಅಲ್ಲದೆ ಸದ್ಯ ಶಕ್ತಿ ಯೋಜನೆಯಲ್ಲಿ ಯಾವುದೇ ಬದಲಾವಣೆ ಇರಲ್ಲ. ಎಲ್ ಗ್ಯಾರಂಟಿ ಯೋಜನೆಗಳಂತೆ ಇದು ಸಹ ಮುಂದುವರಿಯಲಿದೆ. ಸದ್ಯಕ್ಕೆ ಶಕ್ತಿ ಯೋಜನೆಯಡಿ ಸಾರಿಗೆ ಸಂಸ್ಥೆಗಳ ಬಸ್ ಗಳಲ್ಲಿ ಪುರುಷರಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಅವರು ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದ್ದಾರೆ.