ಶನಿವಾರ, 24 ಅಕ್ಟೋಬರ್ 2026

ಇನ್ಮುಂದೆ ಸೊಸೆ ಅಥವಾ ಮಗಳಿಗೆ ಮಾತ್ರ ‘ಗೃಹಲಕ್ಷ್ಮಿ’ ದುಡ್ಡು!!

ರಾಜ್ಯ ಸರ್ಕಾರ ಜಾರಿಗೊಳಿಸಿರುವ  ಗೃಹಲಕ್ಷ್ಮಿ ಯೋಜನೆಯಡಿ ರಾಜ್ಯದ ಪ್ರತಿ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2000 ಕೊಡಮಾಡಲಾಗುತ್ತದೆ. ಆದರೆ ಇಂದು ಅನೇಕ ಕುಟುಂಬಗಳು ಈ ಹಣವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಮರಣ ಹೊಂದಿದವರ ಖಾತೆಗೂ ಗೃಹಲಕ್ಷ್ಮಿ ಹಣ ಜಮಯಾಗುತ್ತಿದೆ. ಹೀಗಾಗಿ ಇದನ್ನು ತಡೆಯಲು ಮಹಿಳೆಯರು ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಕಟಿಸಿದ್ದಾರೆ. ಇದರ ಬೆನ್ನಲ್ಲೇ ಇನ್ನು ಮುಂದೆ ಸೊಸೆ ಮತ್ತು ಮಗಳಿಗೆ ಮಾತ್ರ ಗೃಹಲಕ್ಷ್ಮಿ ಹಣ ಸಿಗುವುದು ಎನ್ನಲಾಗಿದೆ

ಹೌದು, ಈ ಬಾರಿ ಗೃಹಲಕ್ಷ್ಮಿ ಯೋಜನೆಯಲ್ಲಿ ಪ್ರಮುಖ ಬದಲಾವಣೆ ತರಲಾಗಿದ್ದು, ಒಂದು ವೇಳೆ ಈ ಹಿಂದೆ ಗೃಹಲಕ್ಷ್ಮಿ ಹಣ ಪಡೆಯುತ್ತಿದ್ದ ಅತ್ತೆ ಅಥವಾ ತಾಯಿ ನಿಧನರಾದ್ರೆ ಅವರ ಮುಂದಿನ ವಾರಸುದಾರರಾದ ಸೊಸೆ ಅಥವಾ ಮಗಳು ಇಬ್ಬರಲ್ಲಿ ಒಬ್ಬರು ಮಾತ್ರ ಈ ಯೋಜನೆಯ ಲಾಭ ಪಡೆಯಬಹುದು ಎಂದು ಸರ್ಕಾರ ತಿಳಿಸಿದೆ ಆದ್ರೆ, ಅವರ ಹೆಸರು ಕಡ್ಡಾಯವಾಗಿ ಅದೇ ಪಡಿತರ ಚೀಟಿ ಉಲ್ಲೇಖ ಆಗಿರಲೇಬೇಕಿದೆ.