ಸೋಮವಾರ, 26 ಅಕ್ಟೋಬರ್ 2026
Trending

ವಿಧಾನಸಭೆ ಸ್ಪೀಕರ್‌ ಆಗಿ ಜಿ.ಎಸ್‌ ಪಾಟೀಲ್‌

Actress Umashree
Image source: tv9

ಬೆಂಗಳೂರು; ಕರ್ನಾಟಕ ವಿಧಾನಸಭೆ ಹಾಗೂ ವಿಧಾನ ಪರಿಷತ್ತಿಗೆ ಹೊಸ ಪದಾಧಿಕಾರಿಗಳ ಆಯ್ಕೆ ನಡೆದಿದೆ. ಗದಗ ಜಿಲ್ಲೆಯ ರೋಣ ಕ್ಷೇತ್ರ ಶಾಸಕ ಜಿ ಎಸ್‌ ಪಾಟೀಲ್‌ ಅವರು ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ನೇಮಕಗೊಂಡಿದ್ದಾರೆ.

Sponsored

ಎ ಎಸ್‌ ಪೊನ್ನಣ್ಣ ಅವರನ್ನು ಡೆಪ್ಯೂಟಿ ಸ್ಪೀಕರ್‌ ಆಗಿ ಆಯ್ಕೆ ಮಾಡಲಾಗಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ಕ್ಷೇತ್ರದ ಕಾಂಗ್ರೆಸ್‌ ಶಾಸಕರಾಗಿದ್ದಾರೆ ಇವರು. ಸಲೀಂ ಅಹ್ಮದ್‌ ಅವರನ್ನು ಸಭಾಪತಿಯಾಗಿ ಹಾಗೂ ನಟಿ-ರಾಜಕಾರಣಿ ಉಮಾಶ್ರೀ ಅವರನ್ನು ಪರಿಷತ್‌ ಉಪಸಭಾಪತಿಯನ್ನಾಗಿ ಆಯ್ಕೆ ಮಾಡಲಾಗಿದೆ.