

Ganesh Chaturthi: ಗಣೇಶ ಚತುರ್ಥಿಯ ಸಂದರ್ಭದಲ್ಲಿ ಬೆಂಗಳೂರಿನಾದ್ಯಂತ ನಾಳೆ (ಬುಧವಾರ) ಪ್ರಾಣಿ ವಧೆ, ಮಾಂಸ ಮಾರಾಟವನ್ನು ನಿಷೇಧ ಮಾಡಿ ಬಿಬಿಎಂಪಿ ಆದೇಶ ಮಾಡಿದೆ. ಬಿಬಿಎಂಪಿಯ ಪಶುಸಂಗೋಪನಾ ಇಲಾಖೆ ಈ ಆದೇಶ ಹೊರಡಿಸಿದೆ.
ಕಸಾಯಿಖಾನೆಗಳು, ಮಾಂಸದ ಅಂಗಡಿಗಳು ಮುಚ್ಚಲ್ಪಟ್ಟಿರಬೇಕು ಎಂದು ಆದೇಶದಲ್ಲಿ ಉಲ್ಲೇಖ ಮಾಡಲಾಗಿದೆ.













