Home News ನಿರುದ್ಯೋಗಿ ಯುವಕ-ಯುವತಿಯರಿಗೆ ಇಲ್ಲಿದೆ ಸುವರ್ಣಾವಕಾಶ !! | ಮೂರು ತಿಂಗಳ ಉಚಿತ ಕಂಪ್ಯೂಟರ್ ತರಬೇತಿಗೆ ಅರ್ಹ...

ನಿರುದ್ಯೋಗಿ ಯುವಕ-ಯುವತಿಯರಿಗೆ ಇಲ್ಲಿದೆ ಸುವರ್ಣಾವಕಾಶ !! | ಮೂರು ತಿಂಗಳ ಉಚಿತ ಕಂಪ್ಯೂಟರ್ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Hindu neighbor gifts plot of land

Hindu neighbour gifts land to Muslim journalist

ಕೆನರಾ ಬ್ಯಾಂಕ್ ಮಾಹಿತಿ ತಂತ್ರಜ್ಞಾನ ತರಬೇತಿ ಸಂಸ್ಥೆಯ ವತಿಯಿಂದ ನಿರುದ್ಯೋಗಿ ಯುವಕ ಯುವತಿಯರಿಗಾಗಿ ಕಂಪ್ಯೂಟರ್ ಹಾಗೂ ಹಾರ್ಡ್‌ವೇರ್ ಮತ್ತು ನೆಟ್‌ವರ್ಕ್ ಅಡ್ಮಿನಿಸ್ಟ್ರೇಷನ್‌ನಲ್ಲಿ 3 ತಿಂಗಳ ಉಚಿತ ತರಬೇತಿ ನೀಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾಗಿರಬೇಕು. ಪಿಯುಸಿ, ಪದವಿ, ಡಿಪ್ಲೊಮಾ ಪದವಿ ಹೊಂದಿದವರಿಗೆ ಆದ್ಯತೆ ಇರುತ್ತದೆ. 18ರಿಂದ 27 ವರ್ಷದೊಳಗಿನವರು ಹಾಗೂ ಪರಿಶಿಷ್ಟ ಜಾತಿ/ ವರ್ಗದಲ್ಲಿ 30 ವರ್ಷದವರೆಗಿನ ವಯಸ್ಸಿನವರು ಈ ತರಬೇತಿ ಪಡೆಯಲು ಅರ್ಹರು. ಬೆಂಗಳೂರಿನ ಮಲ್ಲೆಶ್ವರದಲ್ಲಿರುವ ಕೆನರಾ ಬ್ಯಾಂಕ್ ಮಾಹಿತಿ ತಂತ್ರಜ್ಞಾನ ತರಬೇತಿ ಸಂಸ್ಥೆಯಲ್ಲಿ ನೇರ ಸಂದರ್ಶನ ಹಾಜರಾಗಬೇಕು.

ಪ್ರತಿದಿನ ಬೆಳಗ್ಗೆ 11 ಗಂಟೆಗೆ ಅರ್ಹತಾ ಪರೀಕ್ಷೆ ಮತ್ತು ಸಂದರ್ಶನಗಳು ನಡೆಯಲಿವೆ. ವಿಳಾಸ: ಕೆನರಾ ಬ್ಯಾಂಕ್ ಮಾಹಿತಿ ತಂತ್ರಜ್ಞಾನ ತರಬೇತಿ ಸಂಸ್ಥೆ, ಚಿತ್ರಾಪುರ ಭವನ, ಮಲ್ಲೇಶ್ವರ, ಬೆಂಗಳೂರು. ದೂ: 2344 0036, 2346 3580, 94485 38107.