

ಶಿವಮೊಗ್ಗ: ಎಲ್.ಕೆ.ಜಿ.ಯಿಂದ ಪದವಿಪೂರ್ವ ಶಿಕ್ಷಣದವರೆಗೆ ವ್ಯಾಸಂಗ ಮಾಡುವ ಎಲ್ಲಾ ಮಕ್ಕಳಿಗೆ ಉಚಿತ ನೋಟ್‌ಪುಸ್ತಕ ಮತ್ತು ಪಠ್ಯಪುಸ್ತಕವನ್ನು ವಿತರಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಧಾರವಾಡ ಮತ್ತು ಕಲಬುರಗಿ ವಿಭಾಗಗಳ ವ್ಯಾಪ್ತಿಯ ಸರ್ಕಾರಿ ಶಾಲೆಗಳಲ್ಲಿ ಕಲಿಕಾ ಸುಧಾರಣಾ ಕ್ರಮಗಳು, ಗುಣಾತ್ಮಕ ಶಿಕ್ಷಣ ಅನುಷ್ಠಾನ ಕ್ರಮಗಳ ಕುರಿತು ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದರು.
ಎಲ್.ಕೆ.ಜಿ.ಯಿಂದ ಪದವಿಪೂರ್ವ ಶಿಕ್ಷಣದವರೆಗೆ ವ್ಯಾಸಂಗ ಮಾಡುವ ಎಲ್ಲಾ ಮಕ್ಕಳಿಗೆ ಉಚಿತ ನೋಟ್‌ಪುಸ್ತಕ ಮತ್ತು ಪಠ್ಯಪುಸ್ತಕವನ್ನು ವಿತರಿಸಲು ಕ್ರಮ ವಹಿಸಲಾಗುತ್ತಿದೆ. ಈವರೆಗೆ ಎಸ್.ಎಸ್.ಎಲ್.ಸಿ. ವರೆಗಿನ ವಿದ್ಯಾರ್ಥಿಗಳಿಗೆ ಮಾತ್ರ ಪಠ್ಯಪುಸ್ತಕ, ನೋಟ್ ಪುಸ್ತಕ, ಬಿಸಿಯೂಟ, ಹಾಲು, ಮೊಟ್ಟೆ ಮತ್ತಿತರ ಸೌಲಭ್ಯಗಳನ್ನು ಒದಗಿಸಲಾಗುತ್ತಿತ್ತು ಎಂದ ಅವರು, ಕಲಿಕೆಯಲ್ಲಿ ದ್ವಿಭಾಷಾ ಶಿಕ್ಷಣಕ್ಕೆ ಒತ್ತು ನೀಡಲಾಗಿದೆ. ಅಂತೆಯೇ ಆರಂಭದಿಂದಲೇ ಕಂಪ್ಯೂಟರ್ ಕಲಿಕೆಗೆ ಕ್ರಮಕೈಗೊಳ್ಳಲಾಗುತ್ತಿದೆ ಎಂದರು.
ಈಗಾಗಲೇ ನಿರ್ಣಯ ಕೈಗೊಂಡಿರುವಂತೆ 500ಕೆ.ಪಿ.ಎಸ್. ಶಾಲೆಗಳ ಜೊತೆಗೆ ಹೆಚ್ಚುವರಿಯಾಗಿ 300ಕೆ.ಪಿ.ಎಸ್. ಶಾಲೆಗಳು ಹಾಗೂ ಅಲ್ಪಸಂಖ್ಯಾತರ ಇಲಾಖೆಗಳ ಅನುದಾನದಿಂದ 100 ಕೆ.ಪಿ.ಎಸ್. ಶಾಲೆಗಳು ಸೇರಿದಂತೆ ಒಟ್ಟು 900ಕೆ.ಪಿ.ಎಸ್. ಶಾಲೆಗಳನ್ನು ಮುಂದಿನ ವರ್ಷಾರಂಭದಲ್ಲಿ ಆರಂಭಿಸಲು ಉದ್ದೇಶಿಸಲಾಗಿದೆ. ಅದಕ್ಕಾಗಿ ಡಿ.ಪಿ.ಆರ್ ಸಿದ್ದಗೊಳ್ಳುತ್ತಿದ್ದು, ಟೆಂಡರ್ ಪ್ರಕ್ರಿಯೆ ಕೂಡ ಪ್ರಗತಿಯಲ್ಲಿದೆ. ಯೋಜನೆಯ ಅಧಿಕೃತ ಉದ್ಘಾಟನೆಗಾಗಿ ಮುಖ್ಯಮಂತ್ರಿಗಳಲ್ಲಿ ದಿನಾಂಕ ನಿಗದಿಗೊಳಿಸಿಕೊಡಲು ಕೋರಲಾಗಿದೆ.
ಈಗಾಗಲೇ ನಿರ್ಣಯ ಕೈಗೊಂಡಿರುವಂತೆ 500ಕೆ.ಪಿ.ಎಸ್. ಶಾಲೆಗಳ ಜೊತೆಗೆ ಹೆಚ್ಚುವರಿಯಾಗಿ 300ಕೆ.ಪಿ.ಎಸ್. ಶಾಲೆಗಳು ಹಾಗೂ ಅಲ್ಪಸಂಖ್ಯಾತರ ಇಲಾಖೆಗಳ ಅನುದಾನದಿಂದ 100 ಕೆ.ಪಿ.ಎಸ್. ಶಾಲೆಗಳು ಸೇರಿದಂತೆ ಒಟ್ಟು 900ಕೆ.ಪಿ.ಎಸ್. ಶಾಲೆಗಳನ್ನು ಮುಂದಿನ ವರ್ಷಾರಂಭದಲ್ಲಿ ಆರಂಭಿಸಲು ಉದ್ದೇಶಿಸಲಾಗಿದೆ. ಅದಕ್ಕಾಗಿ ಡಿ.ಪಿ.ಆರ್ ಸಿದ್ಧಗೊಳ್ಳುತ್ತಿದ್ದು, ಟೆಂಡರ್ ಪ್ರಕ್ರಿಯೆ ಕೂಡ ಪ್ರಗತಿಯಲ್ಲಿದೆ. ಯೋಜನೆಯ ಅಧಿಕೃತ ಉದ್ಘಾಟನೆಗಾಗಿ ಮುಖ್ಯಮಂತ್ರಿಗಳಲ್ಲಿ ದಿನಾಂಕ ನಿಗದಿಗೊಳಿಸಿಕೊಡಲು ಕೋರಲಾಗಿದೆ.
ಪ್ರಸ್ತುತ ಬಂದಿರುವ ಪರೀಕ್ಷಾ ಫಲಿತಾಂಶವೂ ಕೂಡ ಸಮಾಧಾನಕರವಾಗಿದೆ. ಶಿಕ್ಷಣ ಇಲಾಖೆ ಸಮಸ್ಯೆಗಳಿಂದ ಮುಕ್ತವಾಗಿಲ್ಲ. ಆದಾಗ್ಯೂ ಇತ್ತೀಚಿನ ಶಿಕ್ಷಣ ಕ್ಷೇತ್ರದಲ್ಲಿನ ಮಹತ್ವದ ಬದಲಾವಣೆಗಳ ಬಗ್ಗೆ ಸಾರ್ವಜನಿಕ ವಲಯದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದ ಅವರು, ಶಿಕ್ಷಣ ಇಲಾಖೆಯ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾಗುವ ವಿಷಯಗಳನ್ನು, ಸಮಸ್ಯೆ-ಸವಾಲುಗಳನ್ನು ಗಮನಿಸಿ, ಅಗತ್ಯ ಕ್ರಮ ವಹಿಸಲಾಗುತ್ತಿದೆ ಎಂದರು.













