ಮಂಗಳವಾರ, 27 ಅಕ್ಟೋಬರ್ 2026
Trending

ಕರಾವಳಿ ಕಂಬಳ ಆಯೋಜಕರಿಗೆ ಸಿಹಿ ಸುದ್ದಿ-ಅನುದಾನ ಘೋಷಣೆ

Kambala

ರಾಜ್ಯ ಸರಕಾರ ಕಂಬಳ ಆಯೋಜಕರಿಗೆ ಸಿಹಿ ಸುದ್ದಿಯನ್ನು ನೀಡಿದೆ. 2025-26ನೇ ಸಾಲಿನ ಕರಾವಳಿಯಲ್ಲಿ ನಡೆಯುವ 23 ಕಂಬಳಗಳಿಗೆ ತಲಾ ರೂ.5 ಲಕ್ಷ ರಂತೆ ಒಟ್ಟು 1 ಕೋಟಿ 15 ಲಕ್ಷ ರೂ. ಅನುದಾನ ಘೋಷಣೆ ಮಾಡಿದೆ. ಪ್ರವಾಸೋದ್ಯಮ ಇಲಾಖೆಯಿಂದ ಅನುದಾನ ಬಿಡುಗಡೆ ಮಾಡಲಾಗಿದ್ದು, ಸರಕಾರದ ಈ ನಿರ್ಧಾರವನ್ನು ಕಂಬಳ ಸಂಘಟಕರು ಸ್ವಾಗತಿಸಿದ್ದಾರೆ.

Sponsored

ಈ ಕುರಿತು ಪ್ರತಿಕ್ರಿಯೆ ನೀಡಿರುವ ರಾಜ್ಯ ಕಂಬಳ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್‌ ಶೆಟ್ಟಿ, ರಾಜ್ಯ ಸರಕಾರ ನುಡಿದಂತೆ ನಡೆದಿದೆ. ಸಿಎಂ ಡಿಕೆ ಶಿವಕುಮಾರ್‌ ಕಂಬಳ ಆಯೋಜಕರಿಗೆ ಸಿಹಿ ಸುದ್ದಿ ನೀಡಿದ್ದಾರೆ. ಪ್ರತಿ ಕಂಬಳಕ್ಕೂ 5 ಲಕ್ಷ ರೂ ಅನುದಾನ ಕೊಟ್ಟಿದ್ದಾರೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ 23 ಕಂಬಳಗಳಿಗೆ ಇದರಿಂದ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.

Advertisement
Advertisement

 

Advertisement